ವಿರಾಜಪೇಟೆ: ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಯುವ ವೈಭವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಸೇಂಟ್ ಆನ್ಸ್ ಪದವಿ ಕಾಲೇಜಿನ 88 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸಮಗ್ರ ವಿನ್ನರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ರಂಗೋಲಿಯಲ್ಲಿ ದ್ವಿತೀಯ ಸ್ಥಾನ, ಸೆಲ್ಫಿ ಪಾಯಿಂಟ್‌ನಲ್ಲಿ ದ್ವಿತೀಯ, ಕ್ಲಿಕ್ ಕ್ಯಾಂಡಿಡ್‌ನಲ್ಲಿ ಪ್ರಥಮ, ಬೆಸ್ಟ್ ಮ್ಯಾನೇಜರ್‌ನಲ್ಲಿ ಪ್ರಥಮ, ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಫ್ಯೂಷನ್ ಡ್ಯಾನ್ಸ್‌ನಲ್ಲಿ ದ್ವಿತೀಯ, ವಿಜ್ಞಾನ ಮಾದರಿ ರಚನೆಯಲ್ಲಿ ಪ್ರಥಮ, ಪೋಸ್ಟರ್ ನಿರ್ಮಾಣ ಹಾಗೂ ವಿವರಣೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಹೀಗಾಗಿ ಸಾಧಕ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸೇಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳ ಈ ಸಾಧನೆಯು ಅಭಿನಂದನಾರ್ಹವಾಗಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆದಲ್ಲಿಯೂ ಉತ್ತಮವಾದ ಸಾಧನೆ ಮಾಡುತ್ತಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಎನ್‌ಎಸ್‌ಎಸ್ ಹಾಗೂ ಇತರ ಘಟಕಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಉಪನ್ಯಾಸಕರ ಪರಿಶ್ರಮ, ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿಶ್ವವಿದ್ಯಾಲಯ ಮಟ್ಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಸಂತಸ ತಂದಿದ್ದು, ಇದಕ್ಕಾಗಿ ಶ್ರಮಿಸಿದ ಉಪನ್ಯಾಸಕರು ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮಾ, ಸಾಂಸ್ಕೃತಿಕ ಘಟಕದ ಸಂಚಾಲಕಿ ಶಿಲ್ಪಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಇನ್ನಷ್ಟು ಓದಿ