ಹಾಸನ:ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಶಾಲೆ, ಕಾಲೇಜುಗಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವಂತೆ ಪ್ರಧಾನ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದೌರ್ಜನ್ಯದಿಂದ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗದಂತೆ ಎಚ್ಚರವಹಿಸಬೇಕು. ಪೊಲೀಸ್ ಅಧಿಕಾರಿಗಳು ಪೋಕ್ಸೋ ಕಾಯ್ದೆಯಡಿ ದೂರು ಸಲ್ಲಿಕೆಯಾದರೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ರಕ್ಷಣೆ ನೀಡಬೇಕು ಎಂದು ಸೂಚನೆ ನೀಡಿದರು.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಭದ್ರತೆಗಾಗಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ, ಹಿರಿಯ ಸಿವಿಲ್ ನ್ಯಾಯಾಧೀಶ ಗಿರೀಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಇತರರು ಇದ್ದರು.
ಇನ್ನಷ್ಟು ಓದಿ

