ಬೈಂದೂರು:ಸ್ಪಷ್ಟ ಚಿಂತನೆಯೊಂದಿಗೆ ಅಧ್ಯಯನಶೀಲರಾದಾಗ ಯಶಸ್ಸಿನ ಗುರಿ ಮುಟ್ಟಲು ಸಾಧ್ಯ. ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಎಲ್ಲ ಮಕ್ಕಳು ಆದರ್ಶವಾಗಿ ಬೆಳೆಯುತ್ತಾರೆ ಎಂದು ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪಪೂ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪಪೂ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ. ಸ್ವಾಗತಿಸಿದರು. ಉಪನ್ಯಾಸಕ ರಾಮ ನಾಯ್ಕ ಕೆ.ಬಿ. ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಾಸುದೇವ ಉಡುಪ ಪ್ರಾಸ್ತಾವಿಕ ಮಾತನಾಡಿದರು. ಜ್ಯೋತಿ ಶೆಟ್ಟಿ ನಿರೂಪಿಸಿದರು. ನಾಗರಾಜ್ ಅಡಿಗ ವಂದಿಸಿದರು.
ಇನ್ನಷ್ಟು ಓದಿ