ಬೆಂಗಳೂರು: ಮಳೆಗಾಲದ ವಿಧಾನಮಂಡಲ ಕಲಾಪ ಸೋಮವಾರ ಬೆಳಗ್ಗೆ 11ಕ್ಕೆ ಆರಂಭವಾಗಿದೆ. ಪ್ರತಿಭಾರಿ ಅಧಿವೇಶನ ಶುರುವಾಗುತ್ತಿದ್ದ ಸಮಯದಲ್ಲಿ ವಿಧಾನಸೌಧ ಗಿಜುಗಿಡುತ್ತಿತ್ತು. ಆದರೆ, ಈ ಬಾರಿ ಬಹುತೇಕ ಜನಪ್ರತಿನಿಧಿಗಳು ಗೈರಾಗಿದ್ದಾರೆ.
ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವಥ್ ನಾರಾಯಣ್ ಸೇರಿದಂತೆ 50ಕ್ಕೂ ಹೆಚ್ಚು ಶಾಸಕರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಐಸೋಲೇಷನ್ನಲ್ಲಿದ್ದಾರೆ. ಇನ್ನು ಸೋಂಕಿನ ಭೀತಿ ಹಿನ್ನೆಲೆಯಲ್ಲಿ 70 ವರ್ಷ ಮೇಲ್ಪಟ್ಟ ಶಾಸಕರು ಸದನಕ್ಕೆ ಗೈರಾಗಿದ್ದಾರೆ. ಸಾರ್ವಜನಿಕರು, ಶಾಸಕರ ಪಿಎ ಮತ್ತು ಗನ್ ಮ್ಯಾನ್ಗಳಿಗೆ ವಿಧಾನಸಭಾ ಅಧಿವೇಶನಕ್ಕೆ ಪ್ರವೇಶ ಇಲ್ಲ. ಹಾಗಾಗಿ ಈ ಬಾರಿಯ ಸದನ ಖಾಲಿ ಖಾಲಿ ಎನಿಸುತ್ತಿದೆ. 'ಬಿಜೆಪಿಯಲ್ಲಿ ಯಡಿಯೂರಪ್ಪಗೆ ಮತ್ತೊಬ್ಬ ಪ್ರತಿಸ್ಪರ್ಧಿಯೇ ಇಲ್ಲ'
ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಗೋಪಾಲಯ್ಯ, ಬೈರತಿ ಬಸವರಾಜು, ಉಮಾನಾಥ್ ಕೋಟ್ಯಾನ್, ಎಂ.ಪಿ.ಕುಮಾರಸ್ವಾಮಿ, ಎಸ್.ಆರ್.
ಕಲಾಪ ಆರಂಭಕ್ಕೂ ಮುನ್ನ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ ಸೂಚಿಸಲಾಯಿತು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸಂಸದ ಅಶೋಕ್ ಗಸ್ತಿ, ಶಾಸಕ ಸತ್ಯನಾರಾಯಣ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ಸದನ ಆರಂಭವಾಗಿ 30 ನಿಮಿಷ ಕಳೆದರೂ ಬಹುತೇಕ ಶಾಸಕರು ಆಗಮಿಸಿರಲಿಲ್ಲ. ಆಡಳಿತ ಮತ್ತು ವಿಪಕ್ಷ ಕುರ್ಚಿಗಳು ಖಾಲಿ ಖಾಲಿ ಕಾಣಿಸುತ್ತಿದ್ದವು.

