ಕಲಬುರಗಿ: ಇತ್ತೀಚೆಗೆ ಕೆಲ ಜಿಲ್ಲೆಗಳಲ್ಲಿ ವಿಚಿತ್ರ ಜ್ವರ ಕಾಣಿಸಿಕೊಂಡಿದ್ದು, ಹೆಚ್ಚಾಗಿ ಮಕ್ಕಳೇ ಟಾರ್ಗೆಟ್ ಆಗುತ್ತಿದ್ದಾರೆ. ಇದಾಗಲೇ ಹಲವಾರು ಕಡೆಗಳಲ್ಲಿ ಮಕ್ಕಳು ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ.
ಇದರ ಬೆನ್ನಲ್ಲೇ ಇದರೀಗ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಆನೂರ ಗ್ರಾಮದಲ್ಲಿ ಕಳೆದ 15 ದಿನಗಳ ಅಂತರದಲ್ಲಿ ಮೂವರು ಮಕ್ಕಳು ಜ್ವರದಿಂದ ಮೃತಪಟ್ಟಿದ್ದಾರೆ.
ಈ ಬಾಲಕಿಯರು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಇದೇ ರೀತಿ ಹಲವು ಬಾಲಕಿಯರು ಜ್ವರದಿಂದ ಬಳಲುತ್ತಿರುವ ಕಾರಣ ಆನೂರ ಗ್ರಾಮದ ಪಾಲಕರಲ್ಲಿ ಭೀತಿ ಉಂಟಾಗಿದೆ.
ಆನೂರು ಗ್ರಾಮಕ್ಕೆ ಕಲುಷಿತ ಕುಡಿಯುವ ನೀರು ಪುರೈಕೆಯಿಂದಲೆ ಮಕ್ಕಳು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದರೂ ಕಾರಣ ಇನ್ನೂ ತಿಳಿದುಬಂದಿಲ್ಲ. ಇದರ ನಡುವೆಯೇ ಹಲವು ಗ್ರಾಮಸ್ಥರು ಕೂಡ ಅನಾರೋಗ್ಯಪೀಡಿತರಾಗಿದ್ದಾರೆ. ಇಷ್ಟಾದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಇನ್ನೂ ಭೇಟಿ ನೀಡಿ ಪರಿಶೀಲಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
ಮಹಿಳೆಯ ಜೀವ ತೆಗೆದ ಶಾಸಕ ಕುಮಾರಸ್ವಾಮಿ ಕಾರು- ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿಯತ್ತು!

