ಯಾದಗಿರಿ: ಸವೋರ್ಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಸವೋರ್ಚ್ಛ ನ್ಯಾಯಾಲಯವು "ಸಮಾಧಾನ ಸಮಾರೋಹ&2026' ಎಂಬ ವಿಶೇಷ ಲೋಕ ಅದಾಲತ್ನ್ನು ಬರುವ ಆ. 21, 22 ಮತ್ತು 23ರಂದು ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದೆ ಎಂದು ಸಿವಿಲ್ ನ್ಯಾಯಾಧೀಶರೂ ಆಗಿರುವ ಜಿಲ್ಲಾ ಕಾನೂನು ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮರಿಯಪ್ಪ ತಿಳಿಸಿದ್ದಾರೆ.ಈ ಕುರಿತು ಗುರುವಾರ ಸಂಜೆ ಜಿಲ್ಲಾ ಕೋರ್ಟ್ನ ಸಭಾಂಗಣದಲ್ಲಿ ಆಯೋಜಿಸಿದ್ದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಪ್ರಥಮ ಬಾರಿಗೆ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ, ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಇದರಲ್ಲಿ ಯಾದಗಿರಿ ಜಿಲ್ಲೆಯ 15 ಪ್ರಕರಣಗಳು ಗುರುತಿಸಲಾಗಿದೆ.
ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.ಆಸಕ್ತ ಕದಾರರು ಅಥವಾ ಅವರ ವಕೀಲರು ಸವೋರ್ಚ್ಚ ನ್ಯಾಯಾಲಯದ ವೆಬ್ಸೈಟ್ನಲ್ಲಿ ನೀಡಲಾದ ಗೂಗಲ್ ಫಾಮ್ರ್ ಲಿಂಕ್ ಮೂಲಕ ಮೇ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೋಟಿಸ್ ಪಡೆದ ಕದಾರರು ತಾವಿರುವ ಜಿಲ್ಲಾ ಅಥವಾ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಮುಂದೆ ಖುದ್ದಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಂಧಾನ ಸಭೆಗಳಿಗೆ ಹಾಜರಾಗಬಹುದು ಎಂದು ಮರಿಯಪ್ಪ ಹೇಳಿದರು.
ವಿವಿಧ ವ್ಯಾಜ್ಯಗಳುಪ್ರಸ್ತುತ ಸುಪ್ರೀಂ ಕೋರ್ಟ್ ಪ್ರಮುಖವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರೀಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣ, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣ, ಕೌಟುಂಬಿಕ ವಿವಾದ, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನು ವಿವಾದ, ಭೂ ಸ್ವಾಧಿನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಕ್ಕೆ ಗುರುತಿಸಲಾಗಿದೆ.ವಿಸಿ ಮೂಲಕ ಪತ್ರಿಕಾಗೋಷ್ಠಿಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯ ಅನು ಸಿವರಾಮನ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯ ಆರ್. ದೇವದಾಸ್ ಅವರು ಗುರುವಾರ ಸಂಜೆ ಉಚ್ಛ ನ್ಯಾಯಾಲಯದಲ್ಲಿ ವಿಸಿ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನಂತರ ಅದನ್ನು ಇಲ್ಲಿ ವಿವರವಾಗಿ ನ್ಯಾಯಾಧೀಶ ಮರಿಯಪ್ಪ ಪತ್ರಕರ್ತರಿಗೆ ಮಾಹಿತಿ ನೀಡಿದರು.
ಇನ್ನಷ್ಟು ಓದಿ
ಇನ್ನಷ್ಟು ಓದಿ

