Dailyhunt Logo
  • Light mode
    Follow system
    Dark mode
    • Play Story
    • App Story
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ - vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ - vishwanews24

Vishwa News24 1 week ago

ಬೆಳಗಾವಿ:ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ ವೇದಿಕೆಯಾಗಲಿದೆ.

ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು - vishwanews24

ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು ಮತ್ತು ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖ ಪ್ರಚಾರಕರು ಸೇರಿದಂತೆ ಒಟ್ಟು 46 ಪ್ರಾಂತಗಳ ಪ್ರಮುಖ ಕಾರ್ಯಕರ್ತರು., ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಸಂಘದ ಶಾಖೆಗಳ ವಿಸ್ತರಣೆ ಮತ್ತು ಮುಂಬರುವ ದಿನಗಳ ದೇಶವ್ಯಾಪಿ ಕಾರ್ಯಯೋಜನೆಗಳ ಕುರಿತು ಈ ಸಭೆಯಲ್ಲಿ ಗಂಭೀರ ಹಾಗೂ ಮಹತ್ವದ ಚರ್ಚೆಗಳು ನಡೆಯಲಿವೆ.

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ - vishwanews24

ಸಭೆಯ ನೇತೃತ್ವ ವಹಿಸಲು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಜುಲೈ 6 ರಂದೇ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಇವರೊಂದಿಗೆ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ಪ್ರಮುಖ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಸರಸಂಘಚಾಲಕರ ಮುಂಚಿತ ಆಗಮನ ಹಾಗೂ ರಾಷ್ಟ್ರೀಯ ನಾಯಕರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಬೆಳಗಾವಿ ನಗರದಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅತ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ

Dailyhunt
Disclaimer: This content has not been generated, created or edited by Dailyhunt. Publisher: Vishwa News24