Dailyhunt Logo
  • Light mode
    Follow system
    Dark mode
    • Play Story
    • App Story
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

Vishwa News24 2 weeks ago

ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಹಂದಾಡಿ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ.

ರೈಲ್ವೆ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ರೈಲ್ವೆ ಗೇಟ್ ಮೂಲಕ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಇದರಿಂದಾಗಿ ಹಂದಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು, ವಾಹನ ಸವಾರರು ನಿಗದಿತ ಸಮಯದಲ್ಲಿ ಪರ್ಯಾಯ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.

ದುರಸ್ತಿ ಕಾಮಗಾರಿ ಮುಗಿದ ಬಳಿಕ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನ್ನು ಸಾರ್ವಜನಿಕ ಸಂಚಾರಕ್ಕೆ ತೆರೆಯಲಾಗುವುದು ಎಂದು ತಿಳಿಸಲಾಗಿದೆ.

ಹೀಗಾಗಿ ಅಕ್ಟೋಬರ್ 7ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ರೈಲ್ವೆ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24