Dailyhunt Logo
  • Light mode
    Follow system
    Dark mode
    • Play Story
    • App Story
ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ - vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ - vishwanews24

Vishwa News24 4 days ago

ಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕ ಬಿಡುಗಡೆ ಕಾರ್ಯಕ್ರಮದ ಫೋಟೋ ವೈರಲ್ ಆಗಿತ್ತು.

ಅದರಲ್ಲಿ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅವರು, ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದೆ. ಆ ವೇಳೆಗೆ ಮುಂದಿನ ಸಾಲಿನ ಆಸನಗಳೆಲ್ಲ ಭರ್ತಿಯಾಗಿದ್ದವು. ಹೀಗಾಗಿ, ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು - vishwanews24

ಮೊದಲ ಸಾಲಿನಲ್ಲಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ, ಖರ್ಗೆ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ಕೂತಿದ್ದರು. 2ನೇ ಸಾಲಿನಲ್ಲಿ ಕಾಂಗ್ರೆಸ್ ಸಿಎಂಗಳಾದ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ ಸೇರಿ ವಿವಿಧ ರಾಜ್ಯಗಳ ನಾಯಕರು ಕುಳಿತಿದ್ದರು. ಸಿದ್ದರಾಮಯ್ಯ ಅವರು 5ನೇ ಸಾಲಿನಲ್ಲಿ ಕುಳಿತಿದ್ದರು.

ಈ ದೃಶ್ಯ ಸಾಕಷ್ಟು ವೈರಲ್ ಆಗಿತ್ತು. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕಡೆಗಣಿಸುತ್ತಿದೆಯೇ ಎಂಬ ಬಗ್ಗೆಯೂ ಚರ್ಚೆ ಆಗಿತ್ತು. ಹೀಗಾಗಿ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24