Dailyhunt
ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ - vishwanews24

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ - vishwanews24

Vishwa News24 1 week ago

ವದೆಹಲಿ:ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ.ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು.

ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಲಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24