ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬಂಟ್ವಾಳ, ಉಳ್ಳಾಲ, ಸುರತ್ಕಲ್, ಬೆಳ್ತಂಗಡಿ ಸಹಿತ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂ. 24ರಿಂದ 26ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಸಿನ ಗಾಳಿ-ಮಳೆ ಸುರಿಯುವ ಸಾಧ್ಯತೆ ಇದೆ.
ಮಂಗಳೂರಿನಲ್ಲಿ 27.9 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ 1.5 ಡಿ. ಸೆ. ಇಳಿಕೆ ಮತ್ತು 22.5 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ. ಸೆ. ಉಷ್ಣಾಂಶ ಇಳಿಕೆ ಕಂಡಿತ್ತು.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ - vishwanews24

