ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಕಾವೇರಿ ನಿವಾಸದಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ 'ಎಕ್ಸ್' ಹ್ಯಾಂಡಲ್ನಲ್ಲಿ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಪೋಸ್ಟ್ ಮಾಡಲಾಗಿದೆ. ಅಂದು, ಇಂದು, ಎಂದೆಂದು ಒಗ್ಗಟ್ಟೇ ನಮ್ಮ ಶಕ್ತಿ, ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ ಎಂದು ಕಾಂಗ್ರೆಸ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

