Thursday, 26 Nov, 4.10 pm Vishwa News24

ಉಡುಪಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ -Vishwanews24

ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲಾ ಭೇಟಿಯನ್ನು ಹಮ್ಮಿಕೊಂಡಿದ್ದು ನವಂಬರ್ 29ರಂದು ಬೆಳಿಗ್ಗೆ 8.00 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಬೆಳಿಗ್ಗೆ 10.45ಕ್ಕೆ ಉಡುಪಿಗೆ ಆಗಮನದೊಂದಿಗೆ 11.00 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿ ಇರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವರು.

ತದನಂತರ ಮದ್ಯಾಹ್ನ 2.00 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Vishwa News24
Top