Dailyhunt Logo
  • Light mode
    Follow system
    Dark mode
    • Play Story
    • App Story
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ - vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ - vishwanews24

Vishwa News24 1 week ago

ಮೂಡುಬಿದಿರೆ:ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿಯಾದ ಘಟನೆ ಗುರುವಾರ(ಮೇ28)ಸಂಭವಿಸಿದೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿದೆ. ಕಾಂತಾವರ ಕ್ರಾಸ್ ಬಳಿಯ ಯು ಟರ್ನ್ ಅನ್ನು ಬುಧವಾರದಿಂದ ಬಂದ್ ಮಾಡಲಾಗಿದೆ.

ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಹೋಗುವ ಕ್ರಾಸ್ ರಸ್ತೆಯನ್ನು ಏಕಾಏಕಿ ಬಂದ್ ಮಾಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರಿ ಗೊಂದಲ ನಿರ್ಮಾಣವಾಗಿದೆ. ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಕಾಂತಾವರ ಕಡೆಯಿಂದ ಬರುವ ವಾಹನಗಳು ಬೆಳುವಾಯಿ
ಪೇಟೆಗೆ ಹೋಗಲು ಹರಸಾಹಸ ಪಡಬೇಕಾಗಿದೆ.

ವಾಹನ ಸವಾರರು ಅನಿವಾರ್ಯವಾಗಿ ಚಿಲಿಂಬಿ ತನಕ ಹೋಗಿ, ಅಲ್ಲಿಂದ ವಾಹನವನ್ನು ತಿರುಗಿಸಿಕೊಂಡು ಬರಬೇಕಾದ ಪರಿಸ್ಥಿತಿ ಎದುರಾಗಿದೆ. ನಿಯಮಾವಳಿಗಳಿಲ್ಲದೆ ಏಕಾಏಕಿ ರಸ್ತೆ ಬಂದ್ ಮಾಡಿರುವುದರಿಂದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24