Dailyhunt Logo
  • Light mode
    Follow system
    Dark mode
    • Play Story
    • App Story
ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ - vishwanews24

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ - vishwanews24

Vishwa News24 4 hrs ago

ಮುಂಬೈ:ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ, ಬುಧವಾರ (ಜೂನ್ 24) ಸುರಿದ ಭಾರೀ ಮಳೆಯಿಂದಾಗಿ ಉಪನಗರ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ವೇಳೆಗೆ ಮಹಾನಗರದ ಕೆಲವು ಭಾಗಗಳಲ್ಲಿ 200 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ - vishwanews24

ಹಲವೆಡೆ ಮರಗಳು ಉರುಳಿದ್ದು ವಾಹನಗಳು ಹಾನಿಗೊಳಗಾಗಿವೆ. ಅಧಿಕಾರಿಗಳು, ಸಿಬಂದಿಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24