Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ - vishwanews24

ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ - vishwanews24

Vishwa News24 12 hrs ago

ಬೆಂಗಳೂರು:ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ.

ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ - vishwanews24

ರಾಜ್ಯದಲ್ಲಿ 1200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್‌ ಔಷಧಿ ಮಾರಾಟ ಆಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಉಳಿದ ಜನೌಷಧಿ ಕೇಂದ್ರಗಳನ್ನ ಪರಿಶೀಲನೆ ಮಾಡಲಿದ್ದಾರೆ.

ಸದ್ಯ ಜನೌಷಧಿ ಮಾಲೀಕರು ಶೋಕಾಸ್ ನೋಟಿಸ್‌ಗೆ ಉತ್ತರವನ್ನ ಕೊಡಬೇಕು. ಯಾಕೆ ಬ್ರ್ಯಾಂಡೆಡ್‌ ಮಾರಾಟ ಮಾಡುತ್ತಿದ್ದೀರಾ ಎಂದು ಉತ್ತರ ಕೊಡಬೇಕು. ಇಲ್ಲದೇ ಹೋದರೆ ಕಾನೂನು ರೀತಿಯ ಕ್ರಮ ಜರುಗಿಸೋದಕ್ಕೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ - vishwanews24

Dailyhunt
Disclaimer: This content has not been generated, created or edited by Dailyhunt. Publisher: Vishwa News24