ಬೆಳಗಾವಿ :ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:
ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು - vishwanews24
ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು - vishwanews24
ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿರುವುದು ಸ್ಪಷ್ಟವಾಗಿದೆ.
ಇದನ್ನೂ ಓದಿ:
ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು - vishwanews24
ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು - vishwanews24
ತಕ್ಷಣವೇ ಈ ಅನ್ಯಾಯಕರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಜನಪರ ನೀತಿಗಳನ್ನು ಅನುಸರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.

