Dailyhunt Logo
  • Light mode
    Follow system
    Dark mode
    • Play Story
    • App Story
ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ!

ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ!

Vishwavani 1 month ago

ವದೆಹಲಿ: ಕಳೆದ ಮೂರು ತಿಂಗಳ ಹಿಂದೆ ತಮ್ಮ ನಾಯಕತ್ವದಲ್ಲಿ ಭಾರತ ತಂಡಕ್ಕೆ 2026ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2026) ಗೆದ್ದುಕೊಟ್ಟಿದ್ದ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅವರನ್ನು ಇದೀಗ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ಪ್ರವಾಸಗಳ ಟಿ20ಐ ಸರಣಿಗಳ ಭಾರತ ತಂಡದಿಂದ ಕೈ ಬಿಡಲಾಗಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯಲ್ಲಿ ತಮ್ಮ ನಾಯಕತ್ವದ ಮೂಲಕ ಎಲ್ಲರ ಗಮನ ಸೆಳೆದಿದ್ದ ಶ್ರೇಯಸ್‌ ಅಯ್ಯರ್‌ಗೆ ಭಾರತ ಟಿ20ಐ ತಂಡದ ನಾಯಕತ್ವವನ್ನು ನೀಡಲಾಗಿದೆ. ಈ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

2026ರ ಐಪಿಎಲ್‌ ಟೂರ್ನಿಯನ್ನು ಮುಗಿಸಿಕೊಂಡ ಬಳಿಕ ಸೂರ್ಯಕುಮಾರ್‌ ಯಾದವ್‌ ಅವರು ಮುಂಬೈ ಟಿ20‌ ಲೀಗ್ ಆಡುತ್ತಿದ್ದಾರೆ. ಈ ಟೂರ್ನಿಯ ಪಂದ್ಯದ ವೇಳೆ ಭಾರತ ಟಿ20 ತಂಡದಲ್ಲಿ ಸ್ಥಾನ ಕಳೆದುಕೊಂಡ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಟಿ20ಐ ತಂಡದ ನಾಯಕನಾಗಿರುವ ಶ್ರೇಯಸ್‌ ಅಯ್ಯರ್‌ಗೆ ಸೂರ್ಯಕುಮಾರ್‌ ಯಾದವ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

"ಭಾರತ ಟಿ20ಐ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ನಾಯಕನಾಗಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ. ಮುಂಬೈನಲ್ಲಿ ನಾವಿಬ್ಬರೂ ಜೊತೆಯಾಗಿ ಸಾಕಷ್ಟು ಕ್ರಿಕೆಟ್‌ ಆಡಿದ್ದೇವೆ ಹಾಗೂ ಭಾರತ ಟಿ20 ತಂಡದ ಕೊನೆಯ ಮೂವರು ನಾಯಕರು ಮುಂಬೈ ಆಟಗಾರರಾಗಿರುವುದು ನಿಜಕ್ಕೂ ಅದ್ಭುತ ಭಾವನೆಯನ್ನು ನೀಡುತ್ತಿದೆ," ಎಂದು ಶನಿವಾರ ಭಾರತ ತಂಡವನ್ನು ಆಯ್ಕೆ ಮಾಡಿದ ಕೆಲವೇ ಗಂಟೆಗಳಲ್ಲಿ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸತತ ಎರಡು ಐಪಿಎಲ್‌ ಗೆದ್ದರೂ ರಜತ್‌ ಪಾಟಿದಾರ್‌ಗೆ ಭಾರತ ಟಿ20 ತಂಡದಲ್ಲಿ ಏಕೆ ಸ್ಥಾನವಿಲ್ಲ?

2026ರ ಟಿ20 ವಿಶ್ವಕಪ್ ಬಳಿಕ ಭಾರತದ ಮುಂದಿನ ಟಿ20ಐ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಮಹತ್ವದ ಹಾಗೂ ಕಠಿಣ ನಿರ್ಧಾರ ಕೈಗೊಂಡಿದ್ದು, ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಟ್ಟಿದೆ. 2028ರ ಒಲಿಂಪಿಕ್ಸ್ ಹಾಗೂ ಅದೇ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ ಅನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ತಂಡ ನಿರ್ಮಾಣದ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಸೂರ್ಯಕುಮಾರ್ ಯಾದವ್ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಇದರ ಜೊತೆಗೆ ಟಿ20 ವಿಶ್ವಕಪ್‌ನಲ್ಲೂ ಅವರು ಸಾಧಾರಣ ಪ್ರದರ್ಶನ ನೀಡಿದ್ದರಿಂದ, ಅವಕಾಶಕ್ಕಾಗಿ ಕಾಯುತ್ತಿದ್ದ ಯುವ ಆಟಗಾರರಿಗೆ ಆದ್ಯತೆ ನೀಡುವ ಅಗತ್ಯವನ್ನು ಆಯ್ಕೆದಾರರು ತಿಳಿ ಹೇಳಿದ್ದಾರೆ.

ಭಾರತ ಟಿ20 ತಂಡದಿಂದ ಸೂರ್ಯಕುಮಾರ್‌ ಯಾದವ್‌ಗೆ ಕೊಕ್‌ ನೀಡಲು ಕಾರಣವೇನು?

ಇದರ ಮಧ್ಯೆ, 2023ರ ಡಿಸೆಂಬರ್ ನಂತರ ಒಂದೇ ಒಂದು ಟಿ20ಐ ಪಂದ್ಯವನ್ನೂ ಆಡದ ಶ್ರೇಯಸ್ ಅಯ್ಯರ್ ಅವರನ್ನು ಭಾರತದ ಟಿ20 ತಂಡದ ನಾಯಕನಾಗಿ ನೇಮಕ ಮಾಡಲಾಗಿದೆ. ದೇಶಿ ಕ್ರಿಕೆಟ್‌ಗೆ ಆದ್ಯತೆ ನೀಡದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಅಂದು ಭಾರತೀಯ ತಂಡದ ಯೋಜನೆಗಳಿಂದ ಹೊರಗಿಡಲಾಗಿತ್ತು. ಆದರೆ ಶ್ರೇಯಸ್ ಅಯ್ಯರ್ ಅದ್ಭುತವಾಗಿ ಕಮ್‌ಬ್ಯಾಕ್‌ ಮಾಡಿದರು. ಮೊದಲಿಗೆ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಅವರು, ಮುಂದಿನ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್‌ವರೆಗೆ ಮುನ್ನಡೆಸಿದರು.

ಕಳೆದ ಎರಡು ಐಪಿಎಲ್ ಋತುಗಳಲ್ಲಿ ಸ್ಪಿನ್ ಹಾಗೂ ವೇಗದ ಬೌಲರ್‌ಗಳ ವಿರುದ್ಧ ಸಮಾನವಾಗಿ ಪ್ರಭಾವಿ ಬ್ಯಾಟಿಂಗ್ ಪ್ರದರ್ಶಿಸಿದ ಅಯ್ಯರ್, 165ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನೊಂದಿಗೆ ರನ್‌ಗಳ ಸುರಿಮಳೆಗೈದು ತಮ್ಮ ಆಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani