Dailyhunt Logo
  • Light mode
    Follow system
    Dark mode
    • Play Story
    • App Story
Bus Caught fire: ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

Bus Caught fire: ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

Vishwavani 2 months ago

ಟ್ಕಳ: ಮುರುಡೇಶ್ವರ ದೇವಸ್ಥಾನ ರಸ್ತೆಯಲ್ಲಿ ದೂರವಾಣಿ ಕೇಂದ್ರದ ಎದುರುಗಡೆ ಸಾಗುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಬಸ್ ವಾಯುವ್ಯ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ್ದು, ಕುಮಟಾದಿಂದ ಭಟ್ಕಳ ಮಾರ್ಗವಾಗಿ ಮುರುಡೇಶ್ವರ ಬಸ್ ನಿಲ್ದಾಣದತ್ತ ಸಾಗುತ್ತಿತ್ತು.

Bhatkal News: ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದರು. ನಂತರ ಬೆಂಕಿ ವೇಗವಾಗಿ ಹಬ್ಬತೊಡಗಿದರೂ, ಸ್ಥಳೀಯ ಆಟೋ ಚಾಲಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿ ಬೆಂಕಿಯನ್ನು ನಿಯಂತ್ರಿಸಲು ಯಶಸ್ವಿ ಯಾದರು.

ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಮತ್ತು ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನೂ ತಿಳಿದು ಬಂದಿಲ್ಲ.

Dailyhunt
Disclaimer: This content has not been generated, created or edited by Dailyhunt. Publisher: Vishwavani