Dailyhunt Logo
  • Light mode
    Follow system
    Dark mode
    • Play Story
    • App Story
ಚನ್ನಪಟ್ಟಣ ತಹಶೀಲ್ದಾರ್ ಮೇಲೆ  ಹಲ್ಲೆ ಮಾಡಿ ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್; ರೌಡಿಶೀಟರ್ ಬಂಧನ, ಇನ್ನಿಬ್ಬರಿಗಾಗಿ ಶೋಧ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿ ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್; ರೌಡಿಶೀಟರ್ ಬಂಧನ, ಇನ್ನಿಬ್ಬರಿಗಾಗಿ ಶೋಧ

Vishwavani 6 days ago

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ (Channapatna) ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ ಹಲ್ಲೆಗೈದು, (Assaulted) ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ.ಗೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳು ತಹಶೀಲ್ದಾರ್ ಗಿರೀಶ್ ಅವರಿಗೆ ಜ್ಯೂಸ್‌ನಲ್ಲಿ ಮದ್ಯ ಬೆರೆಸಿ ಕುಡಿಸಿ ಪ್ರಜ್ಞಾಹೀನರನ್ನಾಗಿಸಿದ್ದಾರೆ. ನಂತರ ಅವರನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 28ರಂದು ಘಟನೆ ನಡೆದಿದ್ದು, ಗಿರೀಶ್ ಅವರು ಚನ್ನಪಟ್ಟಣ ಟೌನ್ ಪೊಲೀಸ್‌ ಠಾಣೆಗೆ ಜುಲೈ 1ರಂದು ದೂರು ಕೊಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನ ಅನುಷ್ ಅಲಿಯಾಸ್ ಅನುಷ್ ಶಿವಪ್ಪ, ಶೋಭರಾಜ್ ಹಾಗೂ ನವೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಅನುಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ತಹಶೀಲ್ದಾರ್‌ ನೀಡಿದ ದೂರಿನಲ್ಲೇನಿದೆ?

ಜೂನ್ 28ರಂದು ತಹಶೀಲ್ದಾರ್ ಗಿರೀಶ್ ಅವರನ್ನು ನೋಡಲು ಬಂದಿದ್ದ ಮೂವರೂ ಆರೋಪಿಗಳು ಮೊದಲಿಗೆ ವಸತಿ ಗೃಹದಲ್ಲೇ ಮದ್ಯ ಸೇವಿಸಿದ್ದಾರೆ. ಈ ಸಂದರ್ಭದಲ್ಲಿ ತಹಶೀಲ್ದಾರ್ ಅವರಿಗೆ ​ಕುಡಿಯಲು ಜ್ಯೂಸ್ ಕೊಟ್ಟಿದ್ದಾರೆ. ಸ್ವಲ್ಪ ಹೊತ್ತಲ್ಲೇ ತಹಶೀಲ್ದಾರ್ ಪ್ರಜ್ಞೆ ಕಳೆದುಕೊಂಡಿದ್ದಾರೆ. ಈ ವೇಳೆ ಆರೋಪಿಗಳು ಗಿರೀಶ್ ಅವರನ್ನು ವಿವಸ್ತ್ರಗೊಳಿಸಿ ವಿಡಿಯೋ ಸೆರೆಹಿಡಿದುಕೊಂಡಿದ್ದಾರೆ. ಬಳಿಕ ಹಲ್ಲೆ ಮಾಡಿದ್ದು, ಈ ಸಂದರ್ಭದಲ್ಲಿ ಎಚ್ಚರಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ರೋಡ್‌ ರೇಜ್‌; ರಸ್ತೆ ಮಧ್ಯೆಯೇ ಕಾರ್ ಅಡ್ಡಗಟ್ಟಿ ಕುಟುಂಬದ ಮೇಲೆ ಅಪರಿಚಿತರಿಂದ ಹಲ್ಲೆ

ಆಗ ಅವರ ಚಿನ್ನದ ಉಂಗುರ, ಚಿನ್ನದ ಸರ, ಬೆಳ್ಳಿಯ ಉಡುದಾರ ಕಿತ್ತುಕೊಂಡಿದ್ದಾರೆ. ಇದಾದ ಬಳಿಕ ವಿಡಿಯೋ ಇಟ್ಟುಕೊಂಡು 10 ಲಕ್ಷಕ್ಕೆ ಬ್ಲಾಕ್‌ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಇಡೀ ರಾತ್ರಿ ಗೃಹ ಬಂಧನದಲ್ಲಿಟ್ಟು ದೈಹಿಕ ಹಿಂಸೆ ಹಾಗೂ ಹಲ್ಲೆ ನಡೆಸಲಾಗಿದೆ ಎಂದು ಗಿರೀಶ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ರೌಡಿಶೀಟರ್ ಅನುಷ್‌ನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani