Dailyhunt Logo
  • Light mode
    Follow system
    Dark mode
    • Play Story
    • App Story
Chikkaballapur News: ಯಾದವ ಸಮುದಾಯದ ಸಂಘಟನೆ, ಏಳಿಗೆಗೆ ಒಗ್ಗಟ್ಟು ಅಗತ್ಯ: ಡಿ.ಟಿ.ಶ್ರೀನಿವಾಸ್

Chikkaballapur News: ಯಾದವ ಸಮುದಾಯದ ಸಂಘಟನೆ, ಏಳಿಗೆಗೆ ಒಗ್ಗಟ್ಟು ಅಗತ್ಯ: ಡಿ.ಟಿ.ಶ್ರೀನಿವಾಸ್

Vishwavani 3 weeks ago

ಚಿಕ್ಕಬಳ್ಳಾಪುರ: ಯಾದವ ಸಮುದಾಯದ ಸಂಘಟನೆ ಬಲಪಡಿಸುವ ಮೂಲಕ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ವತಿಯಿಂದ ಆಯೋ ಜಿಸಿದ್ದ ಯಾದವ ಸಾಧಕ ರತ್ನ, ಯಾದವ ಸೇವಾ ರತ್ನ ಪ್ರಶಸ್ತಿ ಪ್ರದಾನ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

Chikkaballapur News: ಪಾರ್ಥೇನಿಯಂ ಮುಕ್ತ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಕೆ.ಎನ್.ಗೀತಾ

ಸಮುದಾಯದ ಯುವಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಉನ್ನತ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಸಮುದಾಯದ ಮುಖಂಡರು ಹಾಗೂ ಯುವಕರು ಪರಸ್ಪರ ಸಹಕಾರದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.

ಚಿತ್ರದುರ್ಗದ ಶ್ರೀಕೃಷ್ಣಮಠದ ಯಾದವನಂದನಾಥ ಸ್ವಾಮೀಜಿ ಅವರ ಅಮೃತಹಸ್ತದಿಂದ ಹಾಗೂ ಡಿ.ಟಿ. ಶ್ರೀನಿವಾಸ್, ವಕೀಲ ಕೆ.ಎಂ. ಮುನೇಗೌಡ, ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲ ಎಂ. ಮುನಿರಾಜು ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಕಲಾವಿದ ಸಿ.ಎನ್. ಮುನಿರಾಜ್ ಅವರಿಗೆ ಯಾದವರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಯಕಿ ಮೇರಿ ಹಾಗೂ ಗಾಯಕ ಸಿ.ಎನ್. ಮುನಿರಾಜ್ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಯಾದವ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸುಧಾಕರ್ ಯಾದವ್, ಸಂಘದ ಅಧ್ಯಕ್ಷ ಕೆ.ಸಿ. ಸುನಿಲ್ ಯಾದವ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿ ಗಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani