Dailyhunt Logo
  • Light mode
    Follow system
    Dark mode
    • Play Story
    • App Story
"ಡಿಕೆ ಶಿವಕುಮಾರ್‌ ಮುಂದಿನ ಸಿಎಂ"; ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಣ್ಣೀರು!

"ಡಿಕೆ ಶಿವಕುಮಾರ್‌ ಮುಂದಿನ ಸಿಎಂ"; ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಣ್ಣೀರು!

Vishwavani 0 months ago

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆಗೆ ಇಂದು ಅಧಿಕೃತವಾಗಿ (CM DK Shivakumar) ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ.

ಇಲ್ಲಿಯತನಕ ನೀವೆಲ್ಲ ನನಗೆ ಸಹಕಾರ ನೀಡಿದ್ದೀರಿ. ಇಂದು 3 ಗಂಟೆಗೆ ನಾನು ರಾಜೀನಾಮೆ ನೀಡುತ್ತೇನೆ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಹೈಕಮಾಂಡ್ ಹೇಳಿದೆ ಎಂದು ಘೋಷಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಂತೆ, ಸಭೆಯಲ್ಲಿದ್ದ ಎಲ್ಲಾ ಸಚಿವರುಗಳು ಇದಕ್ಕೆ ಒಮ್ಮತದ ಸಮ್ಮತಿ ಸೂಚಿಸಿದರು. ಪಕ್ಷದ ಹೈಕಮಾಂಡ್ ನಿರ್ಧಾರ ಹಾಗೂ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಸಚಿವ ಸಂಪುಟದ ಎಲ್ಲಾ ಸದಸ್ಯರು ಸಾಥ್ ನೀಡಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಮುಂದಿನ ನಾಯಕತ್ವವನ್ನು ಒಪ್ಪಿಕೊಳ್ಳಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂತೋಷ್‌ ಲಾಡ್‌ ಕಣ್ಣೀರು

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಿರೋ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತುಂಬಾ ಭಾವುಕರಾಗಿದ್ದಾರೆ. ಇಂದು ಬ್ರೇಕ್ ಫಾಸ್ಟ್ ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿರುವ ವಿಷಯ ನೆನದು ಸಂತೋಷ್ ಲಾಡ್ ಕಣ್ಣೀರು ಹಾಕಿದರು. ಈ ವೇಳೆ ಮಾಧ್ಯಮಗಳಿಗೆ ಕೈ ಮುಗಿದು ತಾನು ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ತೆರಳಿದ್ದಾರೆ.

ಸಚಿವರ ಮುಂದೆ ಸಿದ್ದರಾಮಯ್ಯ ಕಣ್ಣೀರು!

ಬ್ರೇಕ್​ ಫಾಸ್ಟ್​ ಮೀಟಿಂಗ್‌ನಲ್ಲಿ ರಾಜೀನಾಮೆಯ ಬಗ್ಗೆ ಮುಕ್ತವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಮುಂದಿನ ಸಿಎಂ ಆಯ್ಕೆಯನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿ ಭಾವುಕರಾಗಿದ್ದಾರೆ. ಡಿಕೆಶಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕ್ಷಣದಲ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಸಿಎಂ ಅವರನ್ನು ಬಿಗಿದಪ್ಪಿದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani