Dailyhunt Logo
  • Light mode
    Follow system
    Dark mode
    • Play Story
    • App Story
ದೀರ್ಘಾವಧಿ ಸಿಎಂ ದಾಖಲೆ ಹೊತ್ತಿನಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!

ದೀರ್ಘಾವಧಿ ಸಿಎಂ ದಾಖಲೆ ಹೊತ್ತಿನಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!

Vishwavani 10 months ago

ಹಾವೇರಿ: ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ನಿರ್ಮಿಸಿದ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದಾಯದ ಮಾತುಗಳನ್ನಾಡಿರುವುದು ಕಂಡುಬಂದಿದೆ. ನೆನ್ನೆಯಷ್ಟೇ ಪೂರ್ಣಾವಧಿ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ಹೇಳಿದ್ದ ಅವರು ಇದೀಗ, ರಾಜಕೀಯದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು.

ಇನ್ನೆಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆ. ಜನರ ಆಶೀರ್ವಾದದಿಂದ ಇಲ್ಲಿವರೆಗೆ ಬಂದಿದ್ದೀನಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ರಾಜಕಾರಣ ತೃಪ್ತಿಕೊಟ್ಟಿದೆ. ಜನರಿಗಾಗಿ ಕೆಲಸ ಮಾಡುವುದೇ ಖುಷಿ. ಪೂರ್ಣಾವಧಿ ಮುಖ್ಯಮಂತ್ರಿ ಆಗುವ ವಿಶ್ವಾಸವಿದ್ದು, ಎಲ್ಲವೂ ಹೈಕಮಾಂಡ್ ತೀರ್ಮಾನವನ್ನು ಅವಲಂಬಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ಹೇಳಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವಾಗಲೇ ಸಿಎಂ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಸಿಎಂ, ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ತಿಳಿಸಿದರು.

ಮಾಧ್ಯಮಗಳ ಜತೆ ಸಿಎಂ ಸಿದ್ದರಾಮಯ್ಯ ಮಾತುಗಳು

Dailyhunt
Disclaimer: This content has not been generated, created or edited by Dailyhunt. Publisher: Vishwavani