Dailyhunt Logo
  • Light mode
    Follow system
    Dark mode
    • Play Story
    • App Story
ಎಸ್‌ಸಿಒ ಶೃಂಗಸಭೆ: ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಎಸ್‌ಸಿಒ ಶೃಂಗಸಭೆ: ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Vishwavani 3 weeks ago

ವದೆಹಲಿ: ಕ್ರೆಮ್ಲಿನ್‌ನಲ್ಲಿ ಇತ್ತೀಚೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ವ್ಲಾಡಿಮಿರ್ ಪುಟಿನ್ ಅವರ ನಡುವೆ ಸಭೆ ನಿಗದಿಯಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ ಬಿಷ್ಕೆಕ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (Shanghai Cooperation Organisation) ಶೃಂಗಸಭೆಯ (SCO Summit) ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇವರಿಬ್ಬರ ನಡುವೆ ಸೋಮವಾರ ಸಭೆ ನಿಗದಿಯಾಗಿದೆ ಎಂದು ಹೇಳಿದೆ.

ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಪುಟಿನ್ ಅವರ ಭೇಟಿ ವೇಳೆ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತಮಿಳುನಾಡು ವಿಧಾನಸಭೆಯಲ್ಲಿ ಅಪರೂಪದ ಪ್ರಸಂಗ: ಸಿಎಂ ಕುರ್ಚಿ ಬಿಟ್ಟು ಸಚಿವರ ಸಾಲಿನಲ್ಲಿ ಕುಳಿತ ವಿಜಯ್

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಪ್ರವಾಸದಲ್ಲಿರಲಿದ್ದು, ಅವರು ಇಲ್ಲಿಗೆ ಭೇಟಿ ನೀಡುವ ಮುನ್ನ ಗುರುವಾರ ವಿದೇಶಾಂಗ ಸಚಿವಾಲಯ ರಷ್ಯಾ ಅಧ್ಯಕ್ಷರೊಂದಿಗೆ ನರೇಂದ್ರ ಮೋದಿ ಅವರ ಸಭೆ ನಿಗದಿಯಾಗಿರುವುದಾಗಿ ತಿಳಿಸಿದೆ.

ಪ್ರಧಾನಿಯವರ ನಾಲ್ಕು ದಿನಗಳ ಪ್ರವಾಸದ ಕುರಿತು ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ (ಪಶ್ಚಿಮ) ಸಿಬಿ ಜಾರ್ಜ್, ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇವರ ಭೇಟಿಯ ಸಮಯ ಮತ್ತು ಅನುಕೂಲತೆಯ ಲಭ್ಯತೆಗೆ ಅನುಗುಣವಾಗಿ ಸಭೆಗಳನ್ನು ನಡೆಸಲಾಗುವುದು. ಶೃಂಗಸಭೆಯ ಹೊರತಾಗಿ ಭಾರತ ಮತ್ತು ರಷ್ಯಾದ ನಾಯಕರ ನಡುವೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಮಾಸ್ಕೋದಲ್ಲಿ ಇತ್ತೀಚಿಗೆ ನಡೆದ ಭಾರತ ಮತ್ತು ರಷ್ಯಾ ನಡುವಿನ ಅಂತರ-ಸರ್ಕಾರಿ ಆಯೋಗ ಸಮಾರಂಭದ ವೇಳೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕ್ರೆಮ್ಲಿನ್‌ನಲ್ಲಿ ಪುಟಿನ್ ಅವರನ್ನು ಭೇಟಿ ಮಾಡಿ ಪ್ರಧಾನಿ ಮೋದಿ ಅವರ ಶುಭಾಶಯಗಳನ್ನು ತಿಳಿಸಿದ್ದರು. ಈ ಸಂದರ್ಭದಲ್ಲಿ ಜೈಶಂಕರ್ ಅವರು ದ್ವಿಪಕ್ಷೀಯ ಆರ್ಥಿಕ ಸಹಕಾರದಲ್ಲಿ ಮುಂದುವರಿಯುವ ಕುರಿತು ಇರುವ ಅವಕಾಶಗಳ ಬಗ್ಗೆ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ಮತ್ತು ಪುಟಿನ್ ಅವರ ನಡುವೆ ಸಭೆ ನಿಗದಿಯಾಗಿದೆ ಎಂದರು.

ಜೈಶಂಕರ್ ಅವರು ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ ಸಿಒ ಶೃಂಗಸಭೆಯಲ್ಲಿ ನಿಮ್ಮನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದಾರೆ. ಬಳಿಕ ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ಕಾಯುತ್ತಿದ್ದಾರೆ ಎಂದು ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ಪುಟಿನ್ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಭರವಸೆ ನೀಡಿದ್ದರು.

ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ವೇಳೆ ಭಾರತದ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಪತ್ತೆಗೆ ಅಡ್ಡ ದಾರಿ ಹಿಡಿದಿದ್ದ ಪಾಕಿಸ್ತಾನ; ಕುತಂತ್ರ ಎಳೆ ಎಳೆಯಾಗಿ ಬಿಚ್ಚಿಟ್ಟ ಏರ್ ಮಾರ್ಷಲ್

ಪ್ರಧಾನಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ಶನಿವಾರ ಮತ್ತು ಭಾನುವಾರ ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದು, ಬಳಿಕ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ 26ನೇ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಬಿಷ್ಕೆಕ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani