Dailyhunt Logo
  • Light mode
    Follow system
    Dark mode
    • Play Story
    • App Story
ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

Vishwavani 2 days ago

ಹಾವೇರಿ, ಆ.05: ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದ ನಾನು ಸಚಿವನಾಗಿದ್ದೇನೆ. ಈ ಸ್ಥಾನವನ್ನು ಜನರ ಸೇವೆಗೆ ಸದ್ಬಳಕೆ ಮಾಡಿಕೊಂಡು ತಾಲೂಕಿನ ಹಾಗೂ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ರಾಜ್ಯದ ನೂತನ ಸಚಿವ ರುದ್ರಪ್ಪ ಲಮಾಣಿ (Rudrappa Lamani) ಹೇಳಿದರು.

ನಗರದ (Haveri News) ಶಿವಬಸವ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಹಾವೇರಿ ಜಿಲ್ಲೆಯ ಆರು ಮಂದಿ ಶಾಸಕರು ಒಂದೇ ಕುಟುಂಬದ ಸದಸ್ಯರಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.

Karnataka Cabinet expansion: ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಮುಖಂಡರಾದ ಎಂ.ಎಂ. ಹಿರೇಮಠ, ಎಂ.ಎಂ. ಮೈದೂರ, ಶ್ರೀಧರ ದೊಡ್ಡಮನಿ, ಗುಡ್ಡನಗೌಡ ಅಂದಾನಿಗೌಡ್ರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani