Dailyhunt Logo
  • Light mode
    Follow system
    Dark mode
    • Play Story
    • App Story
IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ!

IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ!

Vishwavani 1 week ago

ಮ್ಯಾಂಚೆಸ್ಟರ್‌: ಇಲ್ಲಿನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಕಾದಾಟ ನಡೆಸುತ್ತಿವೆ. ಕಳೆದ ಮೂರು ಪಂದ್ಯಗಳಲ್ಲಿ ಬೆಂಚ್‌ ಕಾದಿದ್ದ ಯುವ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ (Vaibhav Sooryavanshi) ಕೊನೆಗೂ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಸ್ಥಾನವನ್ನು ಪಡೆದಿದ್ದಾರೆ.

ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಇದರ ಜೊತೆಗೆ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡರು ಹಾಗೂ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಹಳೆದ ದಾಖಲೆಯನ್ನು ಮುರಿದಿದ್ದಾರೆ.

ಸತತ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಸಂಜು ಸ್ಯಾಮ್ಸನ್‌ ಅವರ ಸ್ಥಾನಕ್ಕೆ 15ರ ವಯಸ್ಸಿನ ವೈಭವ್‌ಗೆ ಚೊಚ್ಚಲ ಅವಕಾಶವನ್ನು ನೀಡಲಾಯಿತು. ಅಂದ ಹಾಗೆ ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಈ ವೇಳೆ ಅವರು ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ ಎಂದು ಮಾಹಿತಿ ನೀಡಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮೂಲಕ ಬಿಹಾರ ಮೂಲದ ಯುವ ಬ್ಯಾಟರ್‌ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

IND vs ENG: ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಭಾರತ, ವೈಭವ್‌ ಸೂರ್ಯವಂಶಿಗೆ ಚೊಚ್ಚಲ ಅವಕಾಶ!

ಐರ್ಲೆಂಡ್‌ ವಿರುದ್ಧದ ಎರಡು ಪಂದ್ಯಗಳ ಟಿ2Oಐ ಸರಣಿಯಲ್ಲಿ ವೈಭವ್‌ ಸೂರ್ಯವಂಶಿ ಬೆಂಚ್‌ ಕಾದಿದ್ದರು ಹಾಗೂ ಈ ಸರಣಿಯಲ್ಲಿ ಭಾರತ ತಂಡ 0-2 ಅಂತರದಲ್ಲಿ ವೈಟ್‌ ವಷ್‌ ಆಘಾತ ಅನುಭವಿಸಿತ್ತು. ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಪಂದ್ಯದಲ್ಲಿಯೂ ಎಡಗೈ ಬ್ಯಾಟ್ಸ್‌ಮನ್‌ಗೆ ನಿರಾಶೆಯಾಗಿತ್ತು. ಇದರ ನಡುವೆ ವೈಭವ್‌ಗೆ ಚೊಚ್ಚಲ ಅವಕಾಶದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಟೀಮ್‌ ಮ್ಯಾನೇಜ್‌ಮೆಂಟ್‌ ಕೂಡ ಸೂಕ್ತ ಸಮಯದಲ್ಲಿ ಯುವ ಬ್ಯಾಟ್ಸ್‌ಮನ್‌ಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿತ್ತು.

ಕ್ರಿಕೆಟ್‌ ದೇವರ 37 ವರ್ಷಗಳ ಹಳೆಯ ದಾಖಲೆ ಮುರಿದ ವೈಭವ್‌

ಇದೀಗ ಟಾಸ್‌ಗೂ ಮುನ್ನ ವೈಭವ್‌ ಸೂರ್ಯವಂಶಿಗೆ ಭಾರತ ತಂಡದ ಚೊಚ್ಚಲ ಕ್ಯಾಪ್‌ ಅನ್ನು ಉಪ ನಾಯಕ ತಿಲಕ್‌ ವರ್ಮಾ ವಿತರಿಸಿದರು. ಆ ಮೂಲಕ 15ರ ವಯಸ್ಸಿನ ಬಾಲಕನ ಕನಸು ನನಸಾಯಿತು. ಇದರೊಂದಿಗೆ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ ಭಾರತದ ಅತ್ಯಂತ ಕಿರಿಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ವೈಭವ್‌ 15 ವರ್ಷ, 99 ದಿನಗಳ ವಯಸ್ಸಿನಲ್ಲಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.

ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರು 1989ರಲ್ಲಿ 16 ವರ್ಷ ಹಾಗೂ 205 ದಿನಗಳ ವಯಸ್ಸಿನಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ 15ನೇ ವಯಸ್ಸಿನಲ್ಲಿಯೇ ಸಚಿನ್‌ ದಾಖಲೆಯನ್ನು ವೈಭವ್‌ ಮುರಿದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರರು

ವೈಭವ್ ಸೂರ್ಯವಂಶಿ: 15 ವರ್ಷ, 99 ದಿನಗಳು- 2026

ಸಚಿನ್ ತೆಂಡೂಲ್ಕರ್: 16 ವರ್ಷ, 205 ದಿನಗಳು- 1989

ಪಿಯೂಷ್ ಚಾವ್ಲಾ: 17 ವರ್ಷ, 75 ದಿನಗಳು- 2006

ಎಲ್ ಶಿವರಾಮಕೃಷ್ಣ: 17 ವರ್ಷ, 118 ದಿನಗಳು-1983

ಪಾರ್ಥಿವ್ ಪಟೇಲ್: 17 ವರ್ಷ, 152 ದಿನಗಳು- 2002

ಮಣೀಂದರ್ ಸಿಂಗ್: 17 ವರ್ಷ, 193 ದಿನಗಳು- 1982

Dailyhunt
Disclaimer: This content has not been generated, created or edited by Dailyhunt. Publisher: Vishwavani