Dailyhunt Logo
  • Light mode
    Follow system
    Dark mode
    • Play Story
    • App Story
Kannada Sahitya Parishad: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

Kannada Sahitya Parishad: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

Vishwavani 2 weeks ago

ಚಿಕ್ಕಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತು(Kannada Sahitya Parishad), ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲ್ಲೂಕು ಸಹಯೋಗದಲ್ಲಿ ಶಾಂತಿನಿಕೇತನ್ಸ್ ಪದವಿ ಪೂರ್ವ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಯನ್ನು ಮೇ 5 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಾಂತಿನಿಕೇತನ್ಸ್ ಪದವಿ ಪೂರ್ವ ಕಾಲೇಜಿ ನಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಜಿ.ಪ್ರಭು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ ರವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ ರವರು ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಾಂತಿನಿಕೇತನ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲರಾದ ಡಾ.ಕುಮಾರ್. ವಿ.ಎನ್ ವಹಿಸಲಿದ್ದಾರೆ.

ಪ್ರಾಸ್ತಾವಿಕ ನುಡಿಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಕೋಡಿರಂಗಪ್ಪ ರವರು ನಡೆಸಿಕೊಡಲಿದ್ದಾರೆ.

ಪ್ರಬಂಧ ರಚನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯನ್ನು ಚಿಕ್ಕಬಳ್ಳಾಪುರ ವಿಶ್ವವಿದ್ಯಾ ಲಯ ಶಿಕ್ಷಣ ಕಾಲೇಜಿನ ಡೀನ್ ಮತ್ತು ಪ್ರಾಂಶುಪಾಲರಾದ ಡಾ.ಜಿ.ಪಿ.ಬಾಹುಬಲಿ ನೆರವೇರಿಸ ಲಿದ್ದಾರೆ.

ಗೌರವ ಉಪಸ್ಥಿತಿಯನ್ನು 10ನೇ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷರಾದ ಗೋಪಾಲಗೌಡ ಕಲ್ವಮಂಜಲಿ, ಜಿಲ್ಲಾ ಕ.ಸಾ.ಪ. ಗೌರವ ಕೋಶಾಧ್ಯಕ್ಷರಾದ ಎಂ ಚನ್ನಮಲ್ಲಿಕಾರ್ಜುನಯ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿಕುಮಾರ್, ಜಿ.ಕಾ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಕ.ಸಾ.ಪ.ಅಧ್ಯಕ್ಷರಾದ ಯಲುವಹಳ್ಳಿ ಸೊಣ್ಣೇಗೌಡ, ಜಿಲ್ಲಾ ಕಾರ್ಯಕಾರಿ ಸಮಿತಿ ಸು ದಾ. ವೆಂಕಟೇಶ್, ಶಿಡ್ಲಘಟ್ಟ ತಾಲ್ಲೂಕು ಕ.ಸಾ.ಪ. ಅಧ್ಯಕ್ಷರು ಪಟೇಲ್ ನಾರಾಯಣಸ್ವಾಮಿ, ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಎಂ. ಶಂಕರ್, ಜಿಲ್ಲಾ ಕ.ಸಾ.ಪ. ಸಮಿತಿ ಸದಸ್ಯರಾದ ಕಲಾ ನಾಗರಾಜ್, ಮಂಚನಬಲೆ ಶ್ರೀನಿವಾಸ್, ನಂದಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮೀರಾ, ಜಿಲ್ಲಾ ಕ.ಸಾ.ಪ ಗೌರವ ಜಂಟಿ ಕಾರ್ಯದರ್ಶಿಗಳಾದ ಟಿ.ವಿ. ಚಂದ್ರಶೇಖರ್, ಪಾ.ಮು.ಚಲಪತಿಗೌಡ, ಎಸ್.ಎನ್.ಅಮೃತ್ ಕುಮಾರ್, ತಾಲ್ಲೂಕು ಕ.ಸಾ.ಪ ಗೌರವ ಕಾರ್ಯದರ್ಶಿ ಕೆ.ಎಂ.ರೆಡ್ಡಪ್ಪ ಭಾಗವಹಿಸಲಿದ್ದಾರೆ.

ಕಾರ್ಯಕ್ರಮ ನಿರ್ವಹಣೆಯನ್ನು ಜಿಲ್ಲಾ ಕ.ಸಾ.ಪ ಗೌರವ ಜಂಟಿ ಕಾರ್ಯದರ್ಶಿಗಳಾದ ಎಸ್. ಸತೀಶ್ ನೆರವೇರಿಸಲಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳ ಕಾರ್ಯಕಾರಿ ಸದಸ್ಯರುಗಳು ಭಾಗವಹಿಸಲಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani