ಬೆಂಗಳೂರು, ಜು. 2: ರಾಜಧಾನಿಯ ಹೊರವಲಯದ ತಾವರೆಕೆರೆ ಸಮೀಪದ ಮಾಗಡಿ ರಸ್ತೆಯ ಮಾದಪಟ್ಟಣ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿಸು ಸಂಭವಿಸಿದ ಭೀಕರ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಗುರುವಾರ (ಜುಲೈ 2) ಬೆಳಗ್ಗೆ ಏಕಾಏಕಿ ಬಂಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ.
ಸ್ಫೋಟದಿಂದ ಈ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದೀಗ ಮೃತರ ಗುರುತು ಪತ್ತೆಯಾಗಿದೆ. ಒಟ್ಟು 20 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಪೈಕಿ ಆರು ಜನ ಮಧ್ಯ ಪ್ರದೇಶ ಮೂಲದವರಾಗಿದ್ದರೆ, ಮತ್ತೋರ್ವ ಕಾರ್ಮಿಕ ಯಾದಗಿರಿ ಜಿಲ್ಲೆಯವರು.
ಮೃತರನ್ನು ರಾಮು (46), ರಾಜಪಾಲ್ ಸಿಂಗ್ (35), ಸತ್ಯನಾರಾಯಣ ಸಿಂಗ್ (31), ರಾಮ ವತಾರ್ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್ ಸಿಂಗ್ ಮತ್ತು ಭುವನೇಶ್ವರ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಉತ್ತರ ಭಾರತದ ನಾಲ್ವರು, ಕರ್ನಾಟಕದ ಓರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಮೈಸೂರು ರಸ್ತೆಯಲ್ಲಿರುವ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಡಿಕೆಶಿ ಪ್ರತಿಕ್ರಿಯೆ:

