Dailyhunt Logo
  • Light mode
    Follow system
    Dark mode
    • Play Story
    • App Story
Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

Vishwavani 1 week ago

ಧುಗಿರಿ, ಆ.05: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ (KN Rajanna) ತಿಳಿಸಿದರು.

ಮಧುಗಿರಿ ತಾಲೂಕಿನ (Madhugiri News) ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಕಾರ್ಯಕ್ರಮಗಳಲ್ಲಿ ಬುಧವಾರ ಭಾಗವಹಿಸಿ, ಅವರು ಮಾತನಾಡಿದರು.

ದೊಡ್ಡೇರಿ ಹೋಬಳಿ ರಂಗಾಪುರ ಗ್ರಾಮದ ಕೆರೆ ಕೋಡಿ ಹತ್ತಿರ ಹಾಗೂ ರಂಗಾಪುರ-ಬಡವನಹಳ್ಳಿ ರಸ್ತೆ ಮಧ್ಯೆ ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಎರಡು ಸೇತುವೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಉಚಿತ ಸಮವಸ್ತ್ರ ಹಾಗೂ ಶೂ ವಿತರಣೆ

ರಂಗಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ, ಅಂಗನವಾಡಿ ಕೇಂದ್ರ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡಿದರು.

ಸೇತುವೆ ನಿರ್ಮಾಣ

ಮಳೆಗಾಲದಲ್ಲಿ ಸಾರ್ವಜನಿಕರು ಎದುರಿಸುತ್ತಿದ್ದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಂಗಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೇತುವೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಬಿ ಜಿ ರಾಮ್ ಜಿ ಯೋಜನೆ

ಮಧುಗಿರಿ ಪಟ್ಟಣದ (PRED) ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ VB-G RAM G ಯೋಜನೆಯ ಅನುಷ್ಠಾನದ ಕುರಿತು ಕ್ರಿಯಾಯೋಜನೆ ತಯಾರಿಸುವ ಸಂಬಂಧ ಎಲ್ಲಾ ಅನುಷ್ಠಾನ ಇಲಾಖೆ ಅಧಿಕಾರಿಗಳೊಂದಿಗೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

ಕಣ್ಣಿನ ಪರೀಕ್ಷೆಗೆ ಚಾಲನೆ: ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕಣ್ಣಿನ ಆರೋಗ್ಯದ ಹಿತದೃಷ್ಟಿಯಿಂದ, ನಾರಾಯಣ ನೇತ್ರಾಲಯದ ವತಿಯಿಂದ ಆಯೋಜಿಸಲಾದ ಉಚಿತ ಕಣ್ಣಿನ ಪರೀಕ್ಷೆ ಹಾಗೂ ನೇತ್ರ ತಪಾಸಣಾ ಶಿಬಿರಕ್ಕೆ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.‌

Utthana Katha Spardhe 2026: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2026ಕ್ಕೆ ಕಥೆಗಳ ಆಹ್ವಾನ; ಅ.10 ಕೊನೆಯ ದಿನ

ಸಾಲ ವಿತರಣೆ: ಐ.ಡಿ.ಹಳ್ಳಿ ಹೋಬಳಿಯ ಐ.ಡಿ.ಹಳ್ಳಿ, ಗರಣಿ ಹಾಗೂ ಕೊಡಿಗೇನಹಳ್ಳಿಯ ಸುದ್ದೇಕುಂಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ರೈತ ಫಲಾನುಭವಿಗಳಿಗೆ ಕೃಷಿ ಸಾಲ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು,ರೈತರು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani