Dailyhunt Logo
  • Light mode
    Follow system
    Dark mode
    • Play Story
    • App Story
ಪ್ರಧಾನಿ ನರೇಂದ್ರ ಮೋದಿ ಮುಂದಿನ ವರ್ಷ ಪಾಕಿಸ್ತಾನಕ್ಕೆ ಭೇಟಿ? ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತ SCO ಸುಮ್ಮಿಟ್?

ಪ್ರಧಾನಿ ನರೇಂದ್ರ ಮೋದಿ ಮುಂದಿನ ವರ್ಷ ಪಾಕಿಸ್ತಾನಕ್ಕೆ ಭೇಟಿ? ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತ SCO ಸುಮ್ಮಿಟ್?

Vishwavani 1 week ago

ಸ್ಲಾಮಾಬಾದ್: ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರನ್ನು ಪಾಕಿಸ್ತಾನಕ್ಕೆ (Pakistan) ಆಹ್ವಾನಿಸುವುದಾಗಿ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು (Pakistans Foreign Office spokesperson) ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂಘೈ ಸಹಕಾರ ಸಂಸ್ಥೆಯ (Shanghai Cooperation Organisation) ಶೃಂಗಸಭೆ (2027 SCO Summit) ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವುದಾಗಿ ಹೇಳಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಕಾರ್ಯವಿಧಾನಗಳಿಗೆ ಅನುಸಾರವಾಗಿ ಭಾರತ ಸೇರಿದಂತೆ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ 2027ರ ಶಾಂಘೈ ಸಹಕಾರ ಸಂಸ್ಥೆಯ ಶೃಂಗ ಸಭೆ ನಡೆಯಲಿದೆ. ಇದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ. ಶಾಂಘೈ ಸಹಕಾರ ಸಂಸ್ಥೆಯ ನಿಯಮಗಳಿಗೆ ಅನುಸಾರವಾಗಿ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡುವುದಾಗಿ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ಹೇಳಿದ್ದಾರೆ.

ನಾಲ್ಕಂತಸ್ತಿನ ಕಟ್ಟಡ ಕುಸಿತ, 9 ಮಂದಿ ಸಾವು: ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ

ಭಾರತ ಸೇರಿದಂತೆ ಎಲ್ಲಾ ಸದಸ್ಯ ರಾಷ್ಟ್ರಗಳಿಗೂ ಕೂಡ ಆಹ್ವಾನಗಳನ್ನು ಕಳುಹಿಸಲಾಗುತ್ತದೆ. ಶಾಂಘೈ ಸಹಕಾರ ಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರು, ಸರ್ಕಾರಗಳಿಗೆ ಆಹ್ವಾನಗಳನ್ನು ಕಳುಹಿಸಲಾಗುತ್ತದೆ. ಭಾರತ ಕೂಡ ಸಂಘಟನೆಯ ಸದಸ್ಯರಾಗಿ ಆಹ್ವಾನ ಸ್ವೀಕರಿಸುತ್ತದೆ ಎಂದು ತಿಳಿಸಿದರು.

ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡುವುದು ಆತಿಥೇಯ ದೇಶದ ಕರ್ತವ್ಯವಾಗಿದೆ. ಇದನ್ನು ನಿಯಮಾನುಸಾರವಾಗಿ ನಿರ್ವಹಿಸಲಾಗುತ್ತದೆ ಎಂದರು.

ಮನಿಲಾದಲ್ಲಿ ನಡೆಯಲಿರುವ ಆಸಿಯಾನ್ ಸಭೆಯ ವೇಳೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವರ ನಡುವೆ ಭೇಟಿ ನಡೆಯಲಿದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು, ನವದೆಹಲಿಯಿಂದ ಅಂತಹ ಯಾವುದೇ ಮಾಹಿತಿ ಇಸ್ಲಾಮಾಬಾದ್‌ಗೆ ತಿಳಿದಿಲ್ಲ ಎಂದರು.

ಶಾಂಘೈ ಸಹಕಾರ ಸಂಸ್ಥೆಯು 10 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದ್ದು, ಇದರಲ್ಲಿ ಚೀನಾ, ರಷ್ಯಾ, ಭಾರತ, ಪಾಕಿಸ್ತಾನ, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್, ಉಜ್ಬೇಕಿಸ್ತಾನ್, ಇರಾನ್ ಮತ್ತು ಬೆಲಾರಸ್ ಸೇರಿದೆ.

ಮತ್ತೆ ಬಾಲ ಬಿಚ್ಚಿದ ಚೀನಾ; ಲಡಾಖ್-ಅರುಣಾಚಲ ಪ್ರದೇಶ ಗಡಿ ಬಳಿ ಭಾರತದತ್ತ ಮುಖ ಮಾಡಿ ಜೆ-20 ಯುದ್ಧ ವಿಮಾನಗಳ ನಿಯೋಜನೆ

2001ರ ಜೂನ್ 15ರಂದು ಇದನ್ನು ಬೀಜಿಂಗ್‌ನಲ್ಲಿ ಸ್ಥಾಪನೆ ಮಾಡಲಾಗಿತ್ತು. ಇದರ ಮುಖ್ಯ ಉದ್ದೇಶ ಯುರೇಷಿಯನ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಆರ್ಥಿಕ ಸಮೃದ್ಧಿಯನ್ನು ಕಾಪಾಡುವುದು ಮತ್ತು ಅಭಿವೃದ್ಧಿ ಪಡಿಸುವುದಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani