Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದ ಹಲವೆಡೆ ವರುಣಾರ್ಭಟ;  3 ಜಿಲ್ಲೆಗೆ ಆರೆಂಜ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ರಾಜ್ಯದ ಹಲವೆಡೆ ವರುಣಾರ್ಭಟ; 3 ಜಿಲ್ಲೆಗೆ ಆರೆಂಜ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

Vishwavani 2 weeks ago

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಭಾರೀ (Karnataka Weather) ಮಳೆಯಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ತೀವ್ರತೆಯನ್ನು ಪರಿಗಣಿಸಿ ಹವಾಮಾನ ಇಲಾಖೆಯು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್ ಘೋಷಿಸಿದೆ.

ಜುಲೈ 4 ಮತ್ತು 5 ರಂದು ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಹಾಗೂ ಹಾವೇರಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗು ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗಲಕೋಟೆ, ಬೀದರ್‌, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಜುಲೈ 5 ರಿಂದ 7ವರೆಗೂ ಮಲೆನಾಡು ಭಾಗದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani