Dailyhunt Logo
  • Light mode
    Follow system
    Dark mode
    • Play Story
    • App Story
RCB vs GT: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

RCB vs GT: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

Vishwavani 3 weeks ago

ಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 42ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ (RCB vs GT) ತಂಡಗಳು ಕಾದಾಟ ನಡೆಸುತ್ತಿವೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಆರ್‌ಸಿಬಿ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಆರ್‌ಸಿಬಿ ಹಾಗೂ ಜಿಟಿ ಈ ಸೀಸನ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಎರಡೂ ತಂಡಗಳು ಮೊದಲ ಬಾರಿ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಬೀಗಿತ್ತು. ಇದೀಗ ಈ ಪಂದ್ಯದಲ್ಲಿಯೂ ಆರ್‌ಸಿಬಿ ಪ್ರಾಬಲ್ಯ ಸಾಧಿಸಲು ಎದುರು ನೋಡುತ್ತಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿತ್ತು. ಶುಭಮನ್‌ ಗಿಲ್‌ ನಾಯಕತ್ವದ ಜಿಟಿ, ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಿತ್ತು.

ಇಂದಿನ ಪಂದ್ಯದಲ್ಲಿ ಆರ್‌ಸಿಬಿ-ಟೈಟಾನ್ಸ್‌ ಆಟಗಾರರು ನಿರ್ಮಿಸಬಹುದಾದ ದಾಖಲೆಗಳಿವು

ಅಂದ ಹಾಗೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ, ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಬೆಂಗಳೂರು ತಂಡ ಉಳಿಸಿಕೊಂಡಿದೆ. ಚೇಸಿಂಗ್‌ ವೇಳೆ ರಸಿಖ್‌ ದಾರ್‌ ಸಲಾಮ್‌ ಅವರು ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಬಹುದು. ಅದೇ ರೀತಿ ಆತಿಥೇಯ ಗುಜರಾತ್‌ ಟೈಟನ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿಯೂ ಯಾವುದೇ ಬದಲಾವಣೆ ಮಾಡಿಲ್ಲ. ಸಿಎಸ್‌ಕೆ ಎದುರು ಆಡಿದ್ದ ಅದೇ ಆಟಗಾರರನ್ನು ಉಳಿಸಿಕೊಂಡಿದೆ.

ಉಭಯ ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ರೊಮ್ಯಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಶ್ ಹೇಝಲ್‌ವುಡ್

ಗುಜರಾತ್‌ ಟೈಟನ್ಸ್:‌ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್‌ ಕೀಪರ್‌), ಜೇಸನ್ ಹೋಲ್ಡರ್, ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ಅರ್ಷದ್ ಖಾನ್, ರಶೀದ್ ಖಾನ್, ಕಗಿಸೊ ರಬಾಡಾ, ಮೊಹಮ್ಮದ್ ಸಿರಾಜ್, ಮಾನವ್ ಸುತಾರ್

ಅಗ್ರ ಸ್ಥಾನದ ಮೇಲೆ ಆರ್‌ಸಿಬಿ ಕಣ್ಣು

ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ ಇಲ್ಲಿಯವರೆಗೂ ಆಡಿದ 8 ಪಂದ್ಯಗಳಿಂದ 6 ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಒಟ್ಟು 12 ಅಂಕಗಳು ಹಾಗೂ +1.919ರ ರನ್‌ರೇಟ್‌ ನೆರವಿನಿಂದ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಗುಜರಾತ್‌ ವಿರುದ್ಧ ಗೆದ್ದರೆ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಲಗ್ಗೆ ಇಡಲಿದೆ.

GT vs RCB: ಇಂದಿನ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ

ಇನ್ನು ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡ ಇಲ್ಲಿಯವರೆಗೂ ಆಡಿದ 8 ಪಂದ್ಯಗಳಿಂದ ನಾಲ್ಕರಲ್ಲಿ ಗೆಲುವು ಹಾಗೂ ನಾಲ್ಕರಲ್ಲಿ ಸೋಲು ಅನುಭವಿಸಿದೆ. ಒಟ್ಟು 8 ಅಂಕಗಳ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಜಿಟಿ ಐದನೇ ಸ್ಥಾನದಲ್ಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani