ಶಿಡ್ಲಘಟ್ಟ: ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಶೀಟರ್‌ಗಳ ಪೆರೇಡ್ ಕಾರ್ಯ ಕ್ರಮವು ಡಿ.ವೈಎಸ್ಪಿ ಮುರಳಿಧರ್ ಅವರ ನೇತೃತ್ವದಲ್ಲಿ ನಡೆಯಿತು. ನಗರ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ರೌಡಿಶೀಟರ್‌ಗಳು ಈ ಪೆರೇಡ್‌ನಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಜಗಳ-ಗಲಾಟೆಗಳಿಗೆ ಕಾರಣವಾಗುವುದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿವೈಎಸ್ಪಿ ಮುರಳಿಧರ್ ಸ್ಪಷ್ಟ ಎಚ್ಚರಿಕೆ ನೀಡಿದರು.
Shidlaghatta News: ಶಿಡ್ಲಘಟ್ಟ ನಗರಸಭೆ ಆದಾಯ ವಸೂಲಾತಿ ಹಕ್ಕುಗಳಿಗೆ ಮರುಹರಾಜು
ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಮುಖ್ಯ ಉದ್ದೇಶವಾಗಿದ್ದು, ರೌಡಿಶೀಟರ್‌ಗಳು ತಮ್ಮ ನಡೆನುಡಿಯಲ್ಲಿ ಬದಲಾವಣೆ ತರಬೇಕು ಎಂದು ಸೂಚಿಸಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಗಳಲ್ಲಿ ಹೆಸರು ಬರುತ್ತದೆ ಎಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಪೊಲೀಸ್ ಅಧಿಕಾರಿಗಳು ರೌಡಿಶೀಟರ್‌ಗಳ ವಿವರಗಳನ್ನು ಪರಿಶೀಲಿಸಿ, ನಿಯಮಿತವಾಗಿ ಠಾಣೆಗೆ ಹಾಜರಾಗುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಆನಂದ್, ನಗರ ಠಾಣೆ ಪಿಎಸ್‌ಐ ವೇಣುಗೋಪಾಲ್, ನಾಗರಾಜ್ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

