Dailyhunt Logo
  • Light mode
    Follow system
    Dark mode
    • Play Story
    • App Story
Shidlaghatta News: ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾದಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

Shidlaghatta News: ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾದಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

Vishwavani 1 month ago

ಶಿಡ್ಲಘಟ್ಟ: ಸಾದಲಿ-ಪೆರೇಸಂದ್ರ ಮುಖ್ಯರಸ್ತೆಯನ್ನು ಶೀಘ್ರ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಸಾದಲಿ ಪಟ್ಟಣದ ಸರ್ಕಲ್‌ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ಥಳೀಯರು ಅನಿರ್ದಿಷ್ಟಾವಧಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಸುಮಾರು 4200 ಕಿಲೋಮೀಟರ್ ಉದ್ದದ ಈ ರಸ್ತೆ ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಕಾಮಗಾರಿ ವಿಳಂಬವಾಗಿರುವುದರ ಜೊತೆಗೆ ಅವೈಜ್ಞಾನಿಕ ರಸ್ತೆ ವಿಸ್ತರಣೆ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Shidlaghatta News: ನಿವೇಶನ ರಹಿತರಿಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕ: ಇಒ ಹೇಮಾವತಿ ಆರ್

ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗದೇ ಇರುವ ಕಾರಣ ರಸ್ತೆ ಸಂಪೂರ್ಣ ಹದ ಗೆಟ್ಟಿದ್ದು, ಪ್ರತಿದಿನ ನೂರಾರು ವಾಹನಗಳ ಸಂಚಾರದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಂಡು ರಸ್ತೆ ಅಭಿವೃದ್ಧಿಪಡಿಸಬೇಕು. ಇಲ್ಲವಾದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳು ವವರೆಗೂ ಧರಣಿ ಮುಂದುವರಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಧರಣಿಯಲ್ಲಿ ಸಾಮಾಜಿಕ ಕಾರ್ಯಕರ್ತರು, ಮಾನವ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆ ಸ್ವಯಂಸೇವಕ ನರಸಿಂಹಮೂರ್ತಿ ಹಾಗೂ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani