Dailyhunt Logo
  • Light mode
    Follow system
    Dark mode
    • Play Story
    • App Story
Siddaramaiah Resigns: ʼʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

Siddaramaiah Resigns: ʼʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

Vishwavani 0 months ago

ಬೆಂಗಳೂರು, ಮೇ 28: ''ರಾಷ್ಟ್ರ ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕೀಯವೇ ನನಗೆ ಇಷ್ಟʼʼ-ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಗುರುವಾರ (ಮೇ 28) ಲೋಕ ಭವನಕ್ಕೆ ತೆರಳಿದ ಅವರು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಬಳಿಕ ಭಾವುಕರಾಗಿ ವಿದಾಯ ಭಾಷಣ ಮಾಡಿ ನೆರವಾದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಆ ಮೂಲಕ ರಾಜ್ಯದ ಸುದೀರ್ಘ ಸಿಎಂ ಎನ್ನುವ ದಾಖಲೆ ಬರೆದ ಸಿದ್ದರಾಮಯ್ಯ ಅವರ ಯುಗಾಂತ್ಯವಾದಂತಾಗಿದೆ.

ʼʼಲೋಕ ಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜ್ಯಪಾಲರು ಬಂದ ಕೂಡಲೇ ರಾಜೀನಾಮೆ ಅಂಗೀಕರಿಸುವ ಭರವಸೆ ಇದೆʼʼ ಎಂದರು.

ಸಿದ್ದರಾಮಯ್ಯ ಹೇಳಿದ್ದೇನು?

ʼʼಕಾಂಗ್ರೆಸ್‌ ಹೈಕಮಾಂಡ್‌ ನನಗೆ ರಾಜ್ಯಸಭೆಯ ಆಫರ್‌ ನೀಡಿತ್ತು. ಆದರೆ ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದಿದ್ದೇನೆ. ನನಗೆ ಜನರ ಸೇವೆ ಮಾಡಲು ಇನ್ನೂ 2 ವರ್ಷಗಳ ಅವಕಾಶ ಇದೆʼʼ ಎನ್ನುವ ಮೂಲಕ ರಾಜ್ಯದಲ್ಲೇ ಇರುವುದಾಗಿ ಸ್ಪಷ್ಟಪಡಿಸಿದರು. ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ, ʼʼಇದನ್ನು ಹೈಕಮಾಂಡ್‌ ನಿರ್ಧರಿಸುತ್ತದೆʼʼ ಎಂದು ಹೇಳಿದರು. ಜತೆಗೆ ಹೈಕಮಾಂಡ್‌ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದಾಗಿ ಪುನರುಚ್ಚರಿಸಿದರು.

ಸಿದ್ದರಾಮಯ್ಯ ಸುದ್ದಿಗೋಷ್ಠಿ:

Dailyhunt
Disclaimer: This content has not been generated, created or edited by Dailyhunt. Publisher: Vishwavani