Dailyhunt Logo
  • Light mode
    Follow system
    Dark mode
    • Play Story
    • App Story
ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಪ್ರಲ್ಹಾದ್‌ ಜೋಶಿ ವ್ಯಂಗ್ಯ

ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಪ್ರಲ್ಹಾದ್‌ ಜೋಶಿ ವ್ಯಂಗ್ಯ

Vishwavani 3 weeks ago

ಮಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಮಂಗಳೂರಿನಲ್ಲಿ ಗುರುವಾರ, ಸಿಎಂ ಸಿದ್ದರಾಮಯ್ಯ ಅವರ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿ, ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನದ್ದು ಮಾತಿಗಷ್ಟೇ ಒಬಿಸಿ

ಕಾಂಗ್ರೆಸ್ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದು ದೂರಿದ್ದಾರೆ.

ಅರಾಜಕತೆ-ಅಸ್ಥಿರತೆಯೇ ಕಾಂಗ್ರೆಸ್ ಗ್ಯಾರಂಟಿ

ಅರಾಜಕತೆ, ಅಸ್ಥಿರತೆ, ಅವಿಶ್ವಾಸ, ಗೊಂದಲದ ವಾತಾವರಣವೇ ಕಾಂಗ್ರೆಸ್‌ನ ಗ್ಯಾರಂಟಿ. ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆಂತರಿಕ ಗೊಂದಲ, ಅರಾಜಕತೆ, ಅಸ್ಥಿರತೆ ಪರಾಕಾಷ್ಠೆ ತಲೆದೋರಿದೆ. ಕಾಂಗ್ರೆಸ್ ಒಂದು ಅರಾಜಕತೆಯ ಪಕ್ಷ ಎಂದು ಆರೋಪಿಸಿದರು.

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ

ಅಪ್ಪ ರಾಜೀವ ಗಾಂಧಿ ಅಂದು ವೀರೇಂದ್ರ ಪಾಟೀಲರನ್ನು ನಡೆಸಿಕೊಂಡಂತೆ ಮಗ ರಾಹುಲ್ ಗಾಂಧಿ ಇಂದು ಸಿದ್ದರಾಮಯ್ಯ ಅವರನ್ನು ನಡೆಸಿಕೊಂಡಿದ್ದಾರೆ. ರಾಜೀವ್ ಗಾಂಧಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಪಮಾನಿಸಿದರು. ಅಂತೆಯೇ ಮಗ ರಾಹುಲ್ ಗಾಂಧಿ ಸಹ ಸಿದ್ದರಾಮಯ್ಯ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಅವಮಾನಿಸಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಆರ್ಥಿಕತೆ ಹದಗೆಡಿಸಿ, ಹೈ ಕಮಾಂಡ್‌ಗೆ ATM ಆಗಿದ್ರು

ಸಿದ್ದರಾಮಯ್ಯ ವಿದಾಯ ಭಾಷಣದಲ್ಲಿ ರಾಜ್ಯದ ಸಂಪತ್ತು ‌ಬರಿದಾಗಿದ್ದನ್ನು ಪ್ರಸ್ತಾಪಿಸುತ್ತ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದ ಜೋಶಿ, ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳು ಮತ್ತು ಹೈಕಮಾಂಡ್ ಅನ್ನು ತೃಪ್ತಿಪಡಿಸಲು ಹೋಗಿ ರಾಜ್ಯದ ಆರ್ಥಿಕತೆಯನ್ನು ಹದಗೆಡಿಸಿದರು ಎಂದು ತಿರುಗೇಟು ನೀಡಿದರು.‌

ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ - 2026: ಸೊರಬದಲ್ಲಿ ಬಿ.ವೈ. ರಾಘವೇಂದ್ರ ಚಾಲನೆ

ರಾಜ್ಯದಲ್ಲಿ ಬಹುತೇಕ ವಸ್ತುಗಳ ಬೆಲೆ ಏರಿಸಿ ಆರ್ಥಿಕತೆಯನ್ನು ತೂಗಿಸಲು ಸರ್ಕಸ್ ಮಾಡಿದ ಸಿದ್ದರಾಮಯ್ಯ, ಅಭಾವವಿಲ್ಲದ ಸಮಯದಲ್ಲೂ ಮೂರು ಬಾರಿ ಇಂಧನದ ಬೆಲೆ ಏರಿಸಿ ಜನಜೀವನ ದುಬಾರಿ ಮಾಡಿದರೆ, ಕಾಂಗ್ರೆಡ್ ಹೈಕಮಾಂಡ್, ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ATM ರೀತಿ ಬಳಸಿಕೊಂಡಿತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ದೂರಿದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani