Dailyhunt Logo
  • Light mode
    Follow system
    Dark mode
    • Play Story
    • App Story
ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶಾಸಕ ಸಿ. ಪಿ. ಯೋಗೇಶ್ವರ್ ಪುತ್ರ ಧ್ಯಾನ್‌ಗೆ ಸಿಕ್ತು ಸಿಎಂ ಡಿ.ಕೆ. ಶಿವಕುಮಾರ್‌ ಆಶೀರ್ವಾದ

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶಾಸಕ ಸಿ. ಪಿ. ಯೋಗೇಶ್ವರ್ ಪುತ್ರ ಧ್ಯಾನ್‌ಗೆ ಸಿಕ್ತು ಸಿಎಂ ಡಿ.ಕೆ. ಶಿವಕುಮಾರ್‌ ಆಶೀರ್ವಾದ

Vishwavani 1 month ago

ಮಾಜಿ ಸಚಿವ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ. ಪಿ. ಯೋಗೇಶ್ವರ್ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅವರು ಸ್ಯಾಂಡಲ್‌ವುಡ್‌ಗೆ ಭರ್ಜರಿಯಾಗಿ ಎಂಟ್ರಿ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಧ್ಯಾನ್ ಅಭಿನಯದ ಚೊಚ್ಚಲ ಚಿತ್ರಗಳಿಗೆ ಅಧಿಕೃತ ಚಾಲನೆ ನೀಡಲಾಯಿತು.

ವಿಶೇಷವೆಂದರೆ ಧ್ಯಾನ್ ಅವರ ಮೊದಲ ಪ್ರವೇಶದಲ್ಲೇ ಒಟ್ಟೊಟ್ಟಿಗೆ ಎರಡು ಬಿಗ್ ಬಜೆಟ್ ಸಿನಿಮಾಗಳು ಘೋಷಣೆಯಾಗಿದ್ದು, ಎರಡೂ ಚಿತ್ರಗಳಲ್ಲಿ ತಂದೆ-ಮಗ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಕ್ಲಾಪ್

ಧ್ಯಾನ್ ಯೋಗೇಶ್ವರ್ ನಾಯಕ ನಟನಾಗಿ ನಟಿಸುತ್ತಿರುವ 'ಕರ್ಣಾಟಬಲಂ ಅಜೇಯಂ' ಚಿತ್ರದ ಮೊದಲ ದೃಶ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಸಚಿವ ಹಾಗೂ ಶಾಸಕ ಸುಧಾಕರ್, ಶಾಸಕ ಉದಯ್ ಕದಲೂರು, ಎಂಎಲ್‌ಸಿಗಳಾದ ಎಸ್. ರವಿ, ಮೋಹನ್, ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಯಾಂಡಲ್‌ವುಡ್‌ಗೆ ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್ ಪುತ್ರ ಧ್ಯಾನ್‌ ಎಂಟ್ರಿ; ಒಟ್ಟೊಟ್ಟಿಗೆ ಅದ್ದೂರಿಯಾಗಿ ಲಾಂಚ್ ಆಗಲಿವೆ 2 ಸಿನಿಮಾಗಳು!

25 ವರ್ಷಗಳ ನಂತರ ಯೋಗೀಶ್ವರ್ ರೀ-ಎಂಟ್ರಿ

ಪಿ.ಎಂ.ಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ 'ಕರ್ಣಾಟಬಲಂ ಅಜೇಯಂ' ಚಿತ್ರಕ್ಕೆ ಹಿರಿಯ ನಿರ್ದೇಶಕ ನಾಗಣ್ಣ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಸಿ. ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿದ್ದಾರೆ. ಚಿತ್ರದಲ್ಲಿ ಧ್ಯಾನ್ ಜೊತೆಗೆ ಯೋಗೇಶ್ವರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಉಳಿದಂತೆ ಮಿಸ್ ಯೂನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ, ಮಿಸ್ ಯೂನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ ಹಾಗೂ ಜಗಪತಿ ಬಾಬು ಪ್ರಮುಖ ತಾರಾಗಣದಲ್ಲಿದ್ದಾರೆ.

CP Yogeshwar: ಮನೆಗೆ ಪ್ರವೇಶ ನಿರಾಕರಣೆ; ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

ಬರಲಿದೆ ಸೂಪರ್ ಹಿಟ್ 'ಸೈನಿಕ' ಚಿತ್ರದ ಸೀಕ್ವೆಲ್

ಇದರ ಬೆನ್ನಲ್ಲೇ ಸಿ.ಪಿ. ಯೋಗೀಶ್ವರ್ ಅವರ ಹೋಮ್ ಬ್ಯಾನರ್ 'ರಾಜಯೋಗಿ ಫಿಲಂಸ್' ಮೂಲಕ 25 ವರ್ಷಗಳ ಹಿಂದೆ ತೆರೆಕಂಡು ಸೂಪರ್ ಹಿಟ್ ಆಗಿದ್ದ 'ಸೈನಿಕ' ಚಿತ್ರದ ಮುಂದುವರಿದ ಭಾಗ 'ಸೈನಿಕ 2' ಚಿತ್ರವನ್ನೂ ಅಧಿಕೃತವಾಗಿ ಘೋಷಿಸಲಾಗಿದೆ. ಈ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದು, ಇದರಲ್ಲೂ ಸಿ.ಪಿ. ಯೋಗೀಶ್ವರ್ ಹಾಗೂ ಪುತ್ರ ಧ್ಯಾನ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ.

ಈ ಎರಡೂ ಅದ್ದೂರಿ ಸಿನಿಮಾಗಳಿಗೆ ಶೀಲಾ ಯೋಗೀಶ್ವರ್‌ ಅವರು ಬಂಡವಾಳ ಹೂಡುತ್ತಿದ್ದು, ಕೆ.ಪಿ. ಶ್ರೀಕಾಂತ್‌ ಅವರು ಕ್ರಿಯೇಟಿವ್‌ ಪ್ರೊಡ್ಯೂಸರ್ ಆಗಿ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವಿ. ಹರಿಕೃಷ್ಣ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwavani