ಚಿಂತಾಮಣಿ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಯಾತ್ರಾಸ್ಥಳವಾದ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಜಾನ್-ಬಾಬಾಜಾನ್ ದರ್ಗಾದ ಉರುಸ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್( U T Khader ) ಅವರು ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದರ್ಗಾಕ್ಕೆ ಆಗಮಿಸಿದ ಸಚಿವರಿಗೆ ದರ್ಗಾ ಮುಖಂಡರು ಹಾಗೂ ಸ್ಥಳೀಯರು ಆತ್ಮೀಯವಾಗಿ ಸ್ವಾಗತ ಕೋರಿದರು.ಈ ವೇಳೆ ದರ್ಗಾದಲ್ಲಿ ಚಾದರ್ ಸಮರ್ಪಿಸಿ,ನಾಡಿನ ಶಾಂತಿ, ಸೌಹಾರ್ದತೆ,ಸಮೃದ್ಧಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥನೆ ಮಾಡಿದರು.
Chinthamani News: ಮುರುಗಮಲ್ಲ ಉರುಸ್ ಮಹೋತ್ಸವ: ದರ್ಗಾದಲ್ಲಿ ಜೆ.ಕೆ.ಕೃಷ್ಣಾರೆಡ್ಡಿ ವಿಶೇಷ ಪೂಜೆ
ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು"ಚಾರಿತ್ರಿಕ ಹಾಗೂ ಪವಿತ್ರ ವಾದ ಹಜರತ್ ಅಮ್ಮಜಾನ್-ಬಾಬಾಜಾನ್ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವುದು ಅತ್ಯಂತ ಸಂತೋಷ ತಂದಿದೆ.ಭಗವಂತನ ಕೃಪೆಯಿಂದ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಮನಃ ಶಾಂತಿ, ಸಮುದಾಯದ ಏಳಿಗೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬಲಿಷ್ಠ ಭಾರತಕ್ಕಾಗಿ ಪ್ರಾರ್ಥನೆ ಮಾಡಿದ್ದೇನೆ ಎಂದರು.
ದೇವರು ನನಗೆ ನೀಡಿರುವ ಸಚಿವ ಸ್ಥಾನದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಲು ಹಾಗೂ ರಾಜ್ಯದ ಜನರ ಹಿತಕ್ಕಾಗಿ ಸದಾ ಕೆಲಸ ಮಾಡಲು ಶಕ್ತಿ ನೀಡಲಿ ಎಂದು ಪವಿತ್ರ ದರ್ಗಾದಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಕ್ಷೇತ್ರದ ಶಾಸಕರಾದ ಸುಧಾಕರ್ ಅವರು ಈ ಭಾಗದ ಅಭಿವೃದ್ಧಿಗೆ ಈಗಾಗಲೇ ಕಾರ್ಯನಿರ್ವ ಹಿಸುತ್ತಿದ್ದಾರೆ. ಮುರುಗಮಲ್ಲ ಭಾಗದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಆರೋಗ್ಯ ಸಚಿವನಾಗಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವನಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ದರ್ಗಾದ ಪ್ರಮುಖರು ಪದಾಧಿಕಾರಿಗಳು,ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

