ವಾರದ ಐದು ದಿನ 6ರಿಂದ 12ನೇ ತರಗತಿವರೆಗೆ ಶಾಲೆ, ಕಾಲೇಜುಗಳಲ್ಲಿ ಶೇ.100ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಶನಿವಾರ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ.
ಕೋವಿಡ್ 19 ತಜ್ಞರ ಸಲಹೆ, ಸೂಚನೆಯಂತೆ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಹಾಜರಾತಿಯೊಂದಿಗೆ ಶಾಲೆ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ.

