Photo Credit X
ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್‌ನವರು ದೂರು ಕೊಟ್ಟಿದ್ದಾರೆ. ತನಿಖೆಯಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ.
ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಈ ಸಂಬಂಧ ಪಕ್ಷದ ಅಧ್ಯಕ್ಷರು ಸಾಕಷ್ಟು ಬದಲಾವಣೆ ಬಗ್ಗೆ ಚಿಂತಿಸುತ್ತಿದ್ದಾರೆ. ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತಿದೆ ನೋಡೋಣ ಎಂದು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಗ್ಗೆ ಹೇಳಿದರು.
ಸಿಎಂ ಡಿಕೆ ಶಿವಕುಮಾರ್ ಅವರ ಬಳಿ ಪ್ರಸ್ತುತ ಸುಮಾರು 20 ಸಚಿವ ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆಯಿದ್ದು, ಇದಕ್ಕೆ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ವಿಷಯ ನಮ್ಮ ಕೈಯಲ್ಲಿಲ್ಲ ಹೈಕಮಾಂಡ್ ತೀರ್ಮಾನ ಎಂದರು.

