Photo Credit X
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆಯನ್ನು ನೀಡಿದೆ.ಈ ಸೂಚನೆಯನ್ನು CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ನೀಡಲಾಗಿದೆ.
ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುಯಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗು7/ಪ್ತಾ ಕೂಡ ವರ್ಚ್ಯುಯಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ಇನ್ನೂ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಸಂಬಂಧ ಭಾರೀ ಚರ್ಚೆಗಳು ನಡೆಯುತ್ತಲೇ ಬಂದೊದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ CWMA ಕೂಡ ಅದೇ ಪ್ರಮಾಣದ ನೀರು ಹರಿಸಲು ಆದೇಶಿಸಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.

