
ಕೊವಿಡ್ ಸೋಂಕಿತರಿಗಾಗಿ ಅನ್ನದಾನಿ ನೃತ್ಯ ಮಾಡಿ ಮನರಂಜಿಸುವ ಕೆಲಸ ಮಾಡಿದ್ದಾರೆ. ಸೋಂಕಿತರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಉದ್ದೇಶದಿಂದ ಅವರ ಜೊತೆಗೇ ನೃತ್ಯ ಮಾಡಿದ್ದಾರೆ.
ಮಳವಳ್ಳಿ ಪಟ್ಟಣದ ಕೆಎಸ್ ಆರ್ ಟಿಸಿ ತರಬೇತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗಾಗಿ ಶಾಸಕರು ಈ ಮನರಂಜನೆ ನೀಡಿದ್ದಾರೆ. ಜಾನಪದ ಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬಲು ಪ್ರಯತ್ನಿಸಿದ್ದಾರೆ.