Photo Courtesy X
ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ.ಸವಿತಾ ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

