Dailyhunt Logo
  • Light mode
    Follow system
    Dark mode
    • Play Story
    • App Story
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಕ್ಷಣಗಣನೆ: ಬೇಡಿಕೆ ಪಟ್ಟಿಯೊಂದಿಗೆ ಇಂದೇ ದೆಹಲಿಯತ್ತ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಕ್ಷಣಗಣನೆ: ಬೇಡಿಕೆ ಪಟ್ಟಿಯೊಂದಿಗೆ ಇಂದೇ ದೆಹಲಿಯತ್ತ ಸಿದ್ದರಾಮಯ್ಯ

Photo Courtesy X

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಕರೆದಿದ್ದ ಉಪಹಾರ ಸಭೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿ, ಭಾವುಕರಾದರು.
ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಮೂರು ವರ್ಷಗಳ ಕಾರ್ಯವೈಖರಿ ಸಮಾಧಾನ ತಂದಿದೆ ಎಂದು ಹೇಳಿದರು.

ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವರು. ತಮ್ಮ ಆಪ್ತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಕುರಿತಂತೆ ಹೈಕಮಾಂಡ್‌ ಮುಂದೆ ಬೇಡಿಕೆ ಇಡುವ ಸಾಧ್ಯತೆಯಿದೆ. ಮತ್ತೆ ರಾಜ್ಯಸಭೆ ಸದಸ್ಯ ಸ್ಥಾನದ ಕುರಿತೂ ಅವರು ಅಂತಿಮ ನಿರ್ಧಾರಕ್ಕೆ ಬರುವ ನಿರೀಕ್ಷೆಯಿದೆ.


ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಲಿಂಗನ ಮಾಡುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಹಂಚಿಕೊಂಡಿದೆ. ಅಂದು, ಇಂದು, ಎಂದೆಂದು... ಒಗ್ಗಟ್ಟೇ ನಮ್ಮ ಶಕ್ತಿ ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ ಎಂದು ಬರೆದುಕೊಂಡಿದೆ.

ಸಚಿವ ಸಂಪುಟ ಸಹೋದ್ಯೋಗಿಗಳಿಗೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಆಯೋಜಿಸಿರುವ ಉಪಾಹಾರ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ಸಂದೇಶವನ್ನು ಸಿದ್ದರಾಮಯ್ಯ ರವಾನಿಸಿದ್ದಾರೆ.


ತಮ್ಮ ಪತ್ನಿಯ ಆರೋಗ್ಯದಲ್ಲಿ ಏರಪೇರು ಉಂಟಾಗಿರುವ ಕಾರಣ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಬುಧವಾರ ತಡ ರಾತ್ರಿ ದಿಢೀರ್‌ ಆಗಿ ಇಂದೋರ್‌ ತೆರಳಿದ್ದಾರೆ. ಅವರ ಮರಳಿ ಬರುವ ಸಮಯ ನಿಗದಿ ಆಗಿಲ್ಲ. ಹೀಗಾಗಿ ರಾಜ್ಯಪಾಲರ ಕಾರ್ಯದರ್ಶಿಗೆ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
Dailyhunt
Disclaimer: This content has not been generated, created or edited by Dailyhunt. Publisher: Webduniya Kannada