Dailyhunt Logo
  • Light mode
    Follow system
    Dark mode
    • Play Story
    • App Story
ನಮ್ಮ ಈ ಎಲ್ಲಾ ನಾಯಕರಿಗೆ ಮಂತ್ರಿಗಿರಿ ಕೊಡಬೇಕು, ಇಲ್ಲಾಂದ್ರೆ... ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಗೆ ಎಚ್ಚರಿಕೆ

ನಮ್ಮ ಈ ಎಲ್ಲಾ ನಾಯಕರಿಗೆ ಮಂತ್ರಿಗಿರಿ ಕೊಡಬೇಕು, ಇಲ್ಲಾಂದ್ರೆ... ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಗೆ ಎಚ್ಚರಿಕೆ

ಬೆಂಗಳೂರು: ನಮ್ಮ ಈ ಎಲ್ಲಾ ನಾಯಕರಿಗೆ ಮಂತ್ರಿಗಿರಿ ಕೊಡಬೇಕು ಇಲ್ಲಾಂದ್ರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಸ್ಲಿಂ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೆ ಈಗ 13 ಸಚಿವರು ಸೇರ್ಪಡೆಯಾಗಿದ್ದಾರೆ.
ಆ ಪೈಕಿ ಯುಟಿ ಖಾದರ್ ಮಾತ್ರ ಮುಸ್ಲಿಂ ಸಮುದಾಯದವರಾಗಿದ್ದಾರೆ. ಎನ್ ಎ ಹ್ಯಾರಿಸ್ ಮತ್ತು ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷೆಯಿತ್ತಾದರೂ ಮೊದಲ ಹಂತದಲ್ಲಿ ಸಿಕ್ಕಿಲ್ಲ.

ನಿನ್ನೆ ಪ್ರಮಾಣ ವಚನ ಸಮಾರಂಭದಲ್ಲಿ ಜಮೀರ್ ಅಹ್ಮದ್ ಬಂದಿದ್ದರೂ ಅರ್ಧದಲ್ಲೇ ಎದ್ದು ಹೋಗಿದ್ದರು. ಮುಸ್ಲಿಂ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನ ಸಿಕ್ಕಿರುವುದು ಆ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿತ್ತು.

ನಾವು ಹೇಳುವ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ಸಿಗಬೇಕು. ಇಲ್ಲ ಅಂದ್ರೆ ನಾವು ನಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಸಮುದಾಯದ ಮತಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ಋಣವನ್ನು ಕಾಂಗ್ರೆಸ್ ಪಕ್ಷ ತೀರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Webduniya Kannada