ಮೈಸೂರು: ಸ್ಯಾಂಡಲ್ ವುಡ್ ನಟ ಚಿಕ್ಕಣ್ಣ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಾವನಾ ಜೊತೆ ಹಸೆಮಣೆಯೇರಿದ್ದಾರೆ. ಮೈಸೂರಿನ ಕಲ್ಯಾಣ ಮಂಟಪವೊಂದರಲ್ಲಿ ಚಿಕ್ಕಣ್ಣ ಮದುವೆ ಅದ್ಧೂರಿಯಾಗಿ ನೆರವೇರಿದೆ. ಇಂದು 10.45 ರಿಂದ 11.25 ರ ಶುಭ ಮುಹೂರ್ತದಲ್ಲಿ ಪಾವನಾ ಕೊರಳಿಗೆ ಚಿಕ್ಕಣ್ಣ ತಾಳಿ ಕಟ್ಟಿದ್ದಾರೆ.
ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ಕಾಮಿಡಿ ಟೈಮಿಂಗ್ ಮೂಲಕ ಕನ್ನಡಿಗರ ಮನ ಗೆದ್ದಿರುವ ಚಿಕ್ಕಣ್ಣ, 'ಉಪಾಧ್ಯಕ್ಷ' ಸಿನಿಮಾದ ಮೂಲಕ ನಾಯಕ ನಟನಾಗಿಯೂ ಸೈ ಎನಿಸಿಕೊಂಡಿದ್ದಾರೆ. ಸರಳ ಹಾಗೂ ಶಾಸ್ತ್ರೋಕ್ತವಾಗಿ ನಡೆದ ಈ ಮದುವೆ ಸಮಾರಂಭದಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ ನಟ-ನಟಿಯರು, ನಿರ್ದೇಶಕರು ಹಾಗೂ ತಂತ್ರಜ್ಞರು ಪಾಲ್ಗೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಚಿಕ್ಕಣ್ಣ ಅವರ ಮದುವೆಯ ಸುಂದರ ಚಿತ್ರಗಳು ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯಗಳ ಮಳೆಯನ್ನೇ ಸುರಿಸುತ್ತಿದ್ದಾರೆ.

