Dailyhunt
ರಾಜಸ್ಥಾನದಲ್ಲಿ ಭೀಕರ ಅಪಘಾತ: 4 ಮಹಿಳೆಯರ ದುರ್ಮರಣ

ರಾಜಸ್ಥಾನದಲ್ಲಿ ಭೀಕರ ಅಪಘಾತ: 4 ಮಹಿಳೆಯರ ದುರ್ಮರಣ

ಬಾರ್ಮರ್ : ರಾಜಸ್ಥಾನ ರಾಜ್ಯದ ಬಾರ್ಮರ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.


ಬೊಲೆರೋ ಕ್ಯಾಂಪರ್ನಲ್ಲಿ ರಾಜಸ್ಥಾನದ ಲೋಹಾವತ್ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದ ವೇಳೆ ಬಸ್ ಅಪ್ಪಳಿಸಿದೆ.

ಬಾರ್ಮೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ದುರ್ಘಟನೆ ಸಂಭವಿಸಿದ್ದು, ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 10 ಮಂದಿ ಪೈಕಿ ಓರ್ವ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೊಲೆರೋ ಕ್ಯಾಂಪರ್ನಲ್ಲಿ ಲೋಹಾವತ್ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಬಂದ ಬಸ್ ಕ್ಯಾಂಪರ್ಗೆ ಡಿಕ್ಕಿ ಹೊಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ಬಾರ್ಮೆರ್ ಜಿಲ್ಲಾಧಿಕಾರಿ ಲೋಕ ಬಂಧು, ಪೊಲೀಸ್ ವರಿಷ್ಠಾಧಿಕಾರಿ ಆನಂದ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನರಪತ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಓಂಪ್ರಕಾಶ್ ವಿಷ್ಣೋಯ್ ಪರಿಶೀಲನೆ ನಡೆಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Webduniya Kannada