Dailyhunt Logo
  • Light mode
    Follow system
    Dark mode
    • Play Story
    • App Story
ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

Photo Credit X

ರಾಯಚೂರು: ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್‌, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಹೇಳಿದರು.
ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದರು.

ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್‌ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Dailyhunt
Disclaimer: This content has not been generated, created or edited by Dailyhunt. Publisher: Webduniya Kannada