Photo Credit X
ಬೆಂಗಳೂರು: ಸರ್ವಪಕ್ಷೆ ಸಭೆಯಲ್ಲಿ ತೀರ್ಮಾನಿಸುವವರೆಗೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಖಡಕ್ಕಾಗಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿದರು.
CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ ವಾದ ಮಾಡಿದ್ದವರೇ ಈಗಲೂ ವಾದ ಮಾಡಿದ್ದಾರೆ. ಇನ್ನೂ ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದು, ಆ ಬಳಿಕ ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

