Dailyhunt Logo
  • Light mode
    Follow system
    Dark mode
    • Play Story
    • App Story
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ವಿನಯ್ ಕುಲಕರ್ಣಿಗೆ ಈ ಮೊದಲು ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಆದರೆ ಈಗ ಹೈಕೋರ್ಟ್ ವಿಭಾಗೀಯ ಪೀಠ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ. ವಿನಯ್ ಕುಲಕರ್ಣಿ, ಚೆನ್ನಕೇಶವ ಟಿಂಕರಿಕ್ ಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಜೊತೆಗೆ 5 ಲಕ್ಷ ರೂ. ಬಾಂಡ್ ನೀಡಲು ಸೂಚಿಸಲಾಗಿದೆ.

ಆದರೆ ಪಾಸ್ ಪೋರ್ಟ್ ಸೆಷನ್ ಕೋರ್ಟ್ ಗೆ ನೀಡಲು ತಿಳಿಸಲಾಗಿದ್ದು ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿದೆ. ಈ ವೇಳೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ವಿನಯ್ ಪರ ವಕೀಲರು ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಾಲಯ ತವರು ಜಿಲ್ಲೆಗೆ ಭೇಟಿ ನೀಡಲು ಅನುಮತಿ ನೀಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Webduniya Kannada